ಮಂಗಳೂರು: “ಸಿನಿಮಾ ಕಥೆಯ ಮೂಲಕ ಕೇವಲ ಮನರಂಜನೆ ಹಾಗೂ ಸಂದೇಶ ನೀಡಿದರೆ ಸಾಲದು,
ನೋಡಿದವರಿಗೆ ಆ ಚಿತ್ರ ತಮ್ಮದೆ, ತಮ್ಮ ಬದುಕಿನ ಭಾಗ ಎನ್ನುವ ಭಾವನೆ ಮೂಡಬೇಕು. ಸಾಮಾನ್ಯವಾಗಿ ರವಿಕೆ ಅಂದ ತಕ್ಷಣ ಅದರ ಬಗ್ಗೆ ಗಂಭೀರ ಚಿಂತನೆಗಿಂತ ಹತ್ತು ಹಲವು ಹಾಸ್ಯಾಸ್ಪದವಾದ ಭಾವನೆ ಬಹುತೇಕರಲ್ಲಿ ಸಹಜವಾಗಿ ಮೂಡುತ್ತದೆ. ಆದರೆ ಆ ರವಿಕೆಯಿಂದಲೇ ರವಿಕೆಯೊಳಗಿನ ಮನಸ್ಸಿನ ಭಾವನೆಯನ್ನು ಅನಾವರಣಗೊಳಿಸಿ, ಸಮಾಜದಲ್ಲಿ ಅದೆಷ್ಟೋ ಇಂತಹ ಸಂದಿಗ್ಧ ಸ್ಥಿತಿಯಲ್ಲಿರುವ ಹಾಗೂ ಇಂತಹ ಸ್ಥಿತಿಯನ್ನು ಅನುಭವಿಸಿರುವ ಮಹಿಳೆಯರ ಭಾವನೆಗೆ ಈ ಸಿನಿಮಾ ಮೂಲಕ ಬಣ್ಣ ತುಂಬಬೇಕು ಎನ್ನುವ ಹಂಬಲದಿಂದ ರವಿಕೆ ಪ್ರಸಂಗ ಸಿನಿಮಾ ಮಾಡಲಾಗಿದೆ. ಜನರು ಖಂಡಿತ ಸಿನಿಮಾ ಮೆಚ್ಚುತ್ತಾರೆ ಎಂಬ ವಿಶ್ವಾಸವಿದೆ” ಎಂದು ರವಿಕೆ ಪ್ರಸಂಗ ಸಿನಿಮಾದ ನಿರ್ದೇಶಕ ಸಂತೋಷ್ ಕೊಡಂಕೇರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
“ಮದ್ಯಮ ವರ್ಗದ ಕುಟುಂಬವೊಂದು ಗ್ರಾಮೀಣ ಸೊಗಡಿನಲ್ಲಿ ಇರುವ ವಾತಾವರಣ, ಸ್ಥಳೀಯ ಸಂಸ್ಕೃತಿ, ಸಂಪುದಾಯದ ಜೊತೆಗೆ ಹಾಸ್ಯದ ಸ್ಪರ್ಷವನ್ನು ದಕ್ಷಿಣ ಕರ್ನಾಟಕದ ಭಾಷೆಯನ್ನೆ ವಿಭಿನ್ನವಾಗಿ ತೋರಿಸುವ ಮೂಲಕ ಭಾಷಾ ಹಾಗೂ ಆಹಾರ ಸಂಸ್ಕೃತಿಯನ್ನು ಕೂಡ ರವಿಕೆ ಪಸಂಗದಲ್ಲಿ ಸೂಕ್ಷ್ಮವಾಗಿ ತೋರಿಲಾಗಿದೆ. ಒಬ್ಬ ಟೈಲರ್ ಅಂಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ” ಎಂದವರು ಮಾಹಿತಿ ನೀಡಿದರು. ಬಳಿಕ ಮಾತಾಡಿದ ಚಿತ್ರದ ನಾಯಕಿ ಗೀತಾ ಭಾರತಿ ಭಟ್ ಅವರು, “ಈ ಚಿತ್ರದ ಕಥೆ ದಕ್ಷಿಣ ಕನ್ನಡದ ಒಂದು ಹಳ್ಳಿಯಲ್ಲಿ ನಡೆಯುತ್ತದೆ. ಈ ಹಳ್ಳಿಯಲ್ಲಿ ಚಿತ್ರದ ನಾಯಕಿ ‘ಸಾನ್ವಿ’ ಅವಳ ಚಿಕ್ಕ ಕುಟುಂಬದ ಜೊತೆಗೆ ಇರುತ್ತಾಳೆ. ಅವಳು 28 ವರ್ಷ
ವಯಸ್ಸಿನ ಹುಡುಗಿಯಾಗಿದ್ದು, ಈಗಾಗಲೇ ಅವಳಿಗೆ ಸಾಕಷ್ಟು ಮದುವೆ ಸಂಬಂಧಗಳು ಬಂದಿದ್ದರೂ ಯಾವುದೇ ಸಂಬಂಧಗಳು ಅವಳಿಗೆ ಸರಿಯಾಗಿರುವುದಿಲ್ಲ. ಸಾನ್ವಿ ಮದುವೆಯಾಗಲು ಒಬ್ಬ ಸುಂದರವಾದ ಹುಡುಗನನ್ನು ಹುಡುಕುತ್ತಿರುತ್ತಾಳೆ. ಅವಳ ಮನೆಯವರು ಕೂಡ ಅವಳಿಗೆ ಬೇಗ ಮದುವೆ ಮಾಡಬೇಕು ಎಂಬ ಯೋಚನೆಯಲ್ಲಿರುತ್ತಾರೆ. ಎಷ್ಟೋ ಸಂಬಂಧಗಳಿಂದ ತಿರಸ್ಕರಿಸಲ್ಪಟ್ಟ ಸಾನ್ವಿಗೆ ಈ ಬಾರಿ ಒಂದು ಫಾರಿನ್ ಪ್ರಪೋಸಲ್ ಬರುತ್ತದೆ. ಈ ವೇಳೆ ರವಿಕೆ ಹೊಲಿಯಲು ಕೊಡುವಲ್ಲಿಂದ ಸಿನಿಮಾ ಆರಂಭಗೊಂಡು ಕೋರ್ಟ್ ಮೆಟ್ಟಿಲು ಹತ್ತುತ್ತದೆ. ಕೊನೆಗೆ ಒಳ್ಳೆಯ ಸಂದೇಶದೊಂದಿಗೆ ಸಿನಿಮಾ ಮುಕ್ತಾಯವಾಗುತ್ತದೆ” ಎಂದು ಹೇಳಿದರು.
ಬಳಿಕ ಮಾತಾಡಿದ ರಘು ಪಾಂಡೇಶ್ವರ ಅವರು, “ರವಿಕೆ ಪ್ರಸಂಗ ಸಿನಿಮಾ ಜನಸಾಮಾನ್ಯರಿಗೆ ಹತ್ತಿರವಾಗುವ ಸಿನಿಮಾ. ಇದರಲ್ಲಿ ನಟಿಸುವಾಗ ತುಂಬಾನೇ ಎಂಜಾಯ್ ಮಾಡಿದ್ದೇವೆ. ಒಂದೊಳ್ಳೆ ಸಬ್ಜೆಕ್ಟ್ ಇಟ್ಟುಕೊಂಡು ಸಿನಿಮಾ ಮಾಡಿದ್ದು ಪ್ರೀಮಿಯರ್ ಶೋ ವೀಕ್ಷಿಸಿದ ಜನರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದು ನಮಗೆ ಹೆಚ್ಚಿನ ಬಲ ತುಂಬಿದ್ದು ಸಿನಿಮಾ ಪ್ರೇಮಿಗಳಿಗೆ ಖಂಡಿತ ನಿರಾಸೆ ಹುಟ್ಟಿಸುವುದಿಲ್ಲ. ಎಲ್ಲರೂ ಫೆ.16ರಂದು ಸಿನಿಮಾ ಮಂದಿರಕ್ಕೆ ಹೋಗಿ ಸಿನಿಮಾ ನೋಡಿ ನಮ್ಮನ್ನು ಪ್ರೋತ್ಸಾಹಿಸಿ” ಎಂದರು.
ಚಿತ್ರಕ್ಕೆ ಕಥೆ ಮತ್ತು ಸಂಭಾಷಣೆ ಬರೆದಿರುವ ಪಾವನಾ ಸಂತೋಷ್ ಮಾತಾಡಿ, “ಎಲ್ಲಾ ವರ್ಗದ ಜನರನ್ನು ಮುಟ್ಟುವಂತಹ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ, ಕುಟುಂಬ ಸಮೇತರಾಗಿ ವೀಕ್ಷಿಸಬಲ್ಲ ಒಂದೊಳ್ಳೆ ಮೆಸೇಜ್ ಇರುವ ಸಿನಿಮಾ” ಎಂದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಜೊತೆಗೆ ರಕ್ಷಕ್ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರದ ತಾರಾಗಣದಲ್ಲಿ ಗೀತಾ ಭಾರತಿ ಭಟ್, ಸುಮನ್ ರಂಗನಾಥ್, ರಾಕೇಶ್ ಮಯ್ಯ, ಸಂಪತ್ ಮೈತ್ರೇಯ, ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಪ್ರವೀಣ್ ಅಥರ್ವ, ರಘು ಪಾಂಡೇಶ್ವರ್, ಹನುಮಂತೇ ಗೌಡ, ಖುಷಿ ಆಚಾರ್, ಹನುಮಂತ್ ರಾವ್ ಕೆ. ಇರಲಿದ್ದಾರೆ. ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿಯಲ್ಲಿ ಸಿನಿಮಾ ತಯಾರಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…