ಬಂಟ್ವಾಳ: ಕೆಎಸ್.ಆರ್ ಟಿ.ಸಿ ಬಸ್ ಹಾಗೂ ಟ್ಯಾಂಕರ್ ಲಾರಿಗಳೆರಡು ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ಬಂಟ್ವಾಳ – ವಿಲ್ಲಾಂಪುರ ರಾಷ್ಟ್ರೀಯ ಹೆದ್ದಾರಿಯ ಪರ್ಲ ಎಂಬಲ್ಲಿ ನಡೆದಿದೆ.
ಬಂಟ್ವಾಳ ಸಮೀಪದ ಪರ್ಲ ಎಂಬಲ್ಲಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಅಲ್ಪಸ್ವಲ್ಪ ಪ್ರಮಾಣದ ಗಾಯಗಳೊಂದಿಗೆ ಪಾರಾಗಿದ್ದಾರೆ.
ಪರ್ಲ ನಿವಾಸಿ ಭುಜಂಗ ಮೂಲ್ಯ ಎಂಬವರ ಮನೆಗೆ ಬಸ್ ನುಗ್ಗಿದ ಪರಿಣಾಮ ಮನೆಗೆ ಸ್ವಲ್ಪ ಹಾನಿಯಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎ.ಎಸ್.ಐ.ವಿಜಯ್ ಸಿಬ್ಬಂದಿಗಳಾದ ರಮೇಶ್, ರಾಜುಪೂಜಾರಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…