ಉಡುಪಿ: ದುಡಿಯುವ ಮಕ್ಕಳಿಗೆ ನ್ಯಾಯಾಧೀಶೆಯ ಮನ ಮಿಡಿದಿದೆ. ಮಧ್ಯಾಹ್ನ ನಗರದ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಹೊರ ರಾಜ್ಯದ ಮಹಿಳೆಯೊಬ್ಬರು ಇಬ್ಬರು ಪುಟಾಣಿ ಮಕ್ಕಳ ಮೂಲಕ ರಸ್ತೆಯಲ್ಲಿ ಕಲಾಕೃತಿಯುಳ್ಳ ಸಣ್ಣ ಪುಸ್ತಕಗಳನ್ನು ಮಾರಾಟ ಮಾಡಿಸುತ್ತಿದ್ದರು.
ಇದನ್ನು ಗಮನಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ.ಎಸ್ ತಕ್ಷಣ ಪೋಲಿಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ರಕ್ಷಿಸಿದ್ದಾರೆ. ಹಿರಿಯ ಸಿವಿಲ್ ನ್ಯಾಯಧೀಶೆ ಮಹಿಳೆಯನ್ನು ಪ್ರಶ್ನಿಸಲು ಆರಂಭಿಸಿದಾಗ, ಕಣ್ಣೀರಿಡುತ್ತಾ ಮಾತು ಆರಂಭಿಸಿದ ಮಹಿಳೆ, ಹೊಟ್ಟೆಗೆ ತಿನ್ನಲು ಸರಿಯಾದ ವ್ಯವಸ್ಥೆ ಇಲ್ಲ. ಅದಕ್ಕಾಗಿ ಸಣ್ಣ ಕಲಾಕೃತಿಯುಳ್ಳ ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದೇನೆ ಎಂದು ಗದ್ಗದಿತವಾಗಿ ಉತ್ತರಿಸುತ್ತಾ ಸುತ್ತಲು ಸೇರಿದ್ದವರ ಸಿಂಪತಿಯನ್ನು ಗಿಟ್ಟಿಸಿಕೊಳ್ಳಲು ಪ್ರಯತ್ನಿಸಿದರು.
ಬೆಳಗ್ಗಿನಿಂದಲೇ ಮಹಿಳೆಯೂ ಇಬ್ಬರು ಮಕ್ಕಳ ಮೂಲಕ ವ್ಯಾಪರ ನಡೆಸುತ್ತಿದ್ದರು ಎಂದು ಸ್ಥಳೀಯರು ದೂರಿದ್ದಾರೆ. ಮಧ್ಯಾಹ್ನ 2.30 ರ ಸುಮಾರಿಗೆ ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ ಅವರು, ಮಹಿಳೆ ನೆರಳಲ್ಲಿ ಕೂತುಕೊಂಡಿದ್ದು, ವಾಹನಗಳು ಓಡಾಡುವ ರಸ್ತೆಯಲ್ಲಿ ಮಕ್ಕಳು ವಾಹನಕ್ಕೆ ಅಡ್ಡವಾಗಿ ಓಡಿ ಬರುತ್ತಾ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿ, ಮಹಿಳಾ ಠಾಣೆ, ಮಕ್ಕಳ ರಕ್ಷಣಾ ಘಟಕ ಹಾಗು ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…