ಉಡುಪಿ: ನೀರಿನ ಟ್ಯಾಂಕರ್ ವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಉಡುಪಿ ದೊಡ್ಡಣಗುಡ್ಡೆ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಮೃತರನ್ನು ಎಪಿಎಂ ಸಿಟಿ ಬಸ್ ಚಾಲಕ ಮಂಜುನಾಥ್ (36) ಎಂದು ಗುರುತಿಸಲಾಗಿದೆ. ಇವರು ಇಂದು ಸಂಜೆ ತಮ್ಮ ಸ್ಕೂಟರ್ ನಲ್ಲಿ ಬಾಳಿಗ ಹಾಸ್ಪಿಟಲ್ ದೊಡ್ಡಣಗುಡ್ಡೆಯಿಂದ ಪೆರಂಪಳ್ಳಿಯ ತಮ್ಮ ಬಾಡಿಗೆ ಮನೆಗೆ ಹೋಗುತ್ತಿದ್ದರು. ಈ ವೇಳೆ ನೀರಿನ ಟ್ಯಾಂಕರ್ ವೊಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಮಂಜುನಾಥ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಅವರು ತಮ್ಮ ಮಗಳ 2ನೇ ವರ್ಷದ ಹುಟ್ಟುಹಬ್ಬದ ಆಚರಣೆಗಾಗಿ ಕೇಕ್ ಕೊಂಡು ಹೋಗುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…