ಜನ ಮನದ ನಾಡಿ ಮಿಡಿತ

Advertisement

ಸಮನ್ವತೆಯನ್ನು ಕಾಪಾಡಿಕೊಳ್ಳುವುದು ಸಂವಿಧಾನದ ಆಶಯ-ಪುರಂದರ

ಪುತ್ತೂರು: ಸಂವಿಧಾನವನ್ನು ಉಳಿಸಿ ಕಾಪಾಡಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸಂವಿಧಾನದ ಆಶಯದಂತೆ ನಮ್ಮ ಹಕ್ಕುಗಳನ್ನು ಅರಿತು ಬದುಕುವುದರೊಂದಿಗೆ ಸಮನ್ವಯತೆಯಲ್ಲಿ ಸಾಗುವುದು ಸಂವಿಧಾನಕ್ಕೆ ನೀಡುವ ಗೌರವವಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಪುರಂದರ ತಿಳಿಸಿದರು.


ಅವರು ದ.ಕ.ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಇವುಗಳ ಆಶ್ರಯದಲ್ಲಿ ಸೋಮವಾರ ಪುತ್ತೂರು ನಗರದಲ್ಲಿ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದಿAದ ನಾವು ಸ್ವತಂತ್ರ ಬದುಕು ಕಂಡುಕೊಳ್ಳಲು ಸಾಧ್ಯವಾಗಿದೆ. ನಮ್ಮ ಹಕ್ಕುಗಳು ಮತ್ತು ಕರ್ತವ್ಯಗಳ ಪರಿಪಾಲನೆ, ಆಡಳಿತದ ರೂಪುರೇಷೆಗಳು ಸಂವಿಧಾನದಲ್ಲಿ ಅಡಕವಾಗಿದೆ. ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಪರಿಪಾಲನೆಗೆ ಚ್ಯುತಿಯಾಗದಂತೆ ಸಂವಿಧಾನವು ನಮಗೆ ರಕ್ಷಣೆಯನ್ನು ನೀಡಿ ಪರಿಹಾರವನ್ನು ಕಂಡುಕೊಳ್ಳುವAತೆ ಮಾಡುತ್ತದೆ. ಸಂವಿಧಾನದ ಮೂಲಕವೇ ನಮ್ಮ ಜೀವನವಿದೆ. ಎಲ್ಲಾ ನಾಗರಿಕರನ್ನು ಮುಖ್ಯವಾಹಿನಿಗೆ ತರುವುದು ಸಂವಿಧಾನದ ಆಶಯವಾಗಿದೆ. ನಮ್ಮ ಸಂವಿಧಾವು ಪವಿತ್ರ ಮತ್ತು ಬಲಿಷ್ಠವಾಗಿದೆ. ಸಂವಿಧಾನವನ್ನು ನಮಗೆ ನಾವು ಅರ್ಪಿಸಿಕೊಂಡು ೭೫ ವರ್ಷಗಳು ಸಂದಿವೆ. ಅದನ್ನು ಮತ್ತೊಮ್ಮೆ ನೆನಪಿಸಿಕೊಳ್ಳುವುದು ಸಂವಿಧಾನ ಜಾಗೃತಿ ಜಾಥಾದ ಮುಖ್ಯ ಉದ್ದೇಶವಾಗಿದೆ ಎಂದರು.

ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮ ಪಂಚಾಯತ್‌ನಿAದ ಪುತ್ತೂರು ನಗರಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ವಾಹನವನ್ನು ಪರ್ಲಡ್ಕದಲ್ಲಿ ನಗರಕ್ಕೆ ಸ್ವಾಗತಿಸಲಾಯಿತು. ಬಳಿಕ ವಾದ್ಯಗೋಷ್ಟಿಗಳೊಂದಿಗೆ, ಶಾಲಾ ವಿದ್ಯಾರ್ಥಿಗಳ ಕಾಲ್ನಡಿಗೆ ಜಾಥಾ, ಬೈಕ್ ರ‍್ಯಾಲಿಗಳೊಂದಿಗೆ ಸಭಾ ಕಾರ್ಯಕ್ರಮ ನಡೆದ ಪುತ್ತೂರಿನ ಕಿಲ್ಲೆ ಮೈದಾನದ ಸಮೀಪದಲ್ಲಿರುವ ಶಾಸಕರ ಕಚೇರಿಗೆ ಆವರಣಕ್ಕೆ ತರಲಾಯಿತು. ಅಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಸಿ.ಎಂ ಅವರು ಸಂವಿಧಾನ ಪೀಠಿಕೆಯ ಪ್ರತಿಜ್ಞೆಯನ್ನು ಬೋಧಿಸಿದರು.

ಜಾಥಾದ ವಾಹನದಲ್ಲಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಹಾರಾರ್ಪಣೆ ಮಾಡಿದರು. ಜಾಥಾದಲ್ಲಿ ಸಂವಿಧಾನ ಪಠಣ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆಯ ಪೌರಾಯುಕ್ತ ಮಧು ಎಸ್ ಮನೋಹರ್,ಶಿಕ್ಷಣಾಧಿಕಾರಿ ಲೋಕೇಶ್ ಯಸ್, ಆರ್., ಕಾರ್ಯನಿರ್ವಾಹಣಧಿಕಾರಿ ನವೀನ್ ಭ0ಡಾರಿ, ವಿವಿಧ ಇಲಾಖೆಯ ಅಧಿಕಾರಿಗಳು,ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು,ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!