ಪುತ್ತೂರು: ಸಂವಿಧಾನವನ್ನು ಉಳಿಸಿ ಕಾಪಾಡಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸಂವಿಧಾನದ ಆಶಯದಂತೆ ನಮ್ಮ ಹಕ್ಕುಗಳನ್ನು ಅರಿತು ಬದುಕುವುದರೊಂದಿಗೆ ಸಮನ್ವಯತೆಯಲ್ಲಿ ಸಾಗುವುದು ಸಂವಿಧಾನಕ್ಕೆ ನೀಡುವ ಗೌರವವಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಪುರಂದರ ತಿಳಿಸಿದರು.
ಅವರು ದ.ಕ.ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಇವುಗಳ ಆಶ್ರಯದಲ್ಲಿ ಸೋಮವಾರ ಪುತ್ತೂರು ನಗರದಲ್ಲಿ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದಿAದ ನಾವು ಸ್ವತಂತ್ರ ಬದುಕು ಕಂಡುಕೊಳ್ಳಲು ಸಾಧ್ಯವಾಗಿದೆ. ನಮ್ಮ ಹಕ್ಕುಗಳು ಮತ್ತು ಕರ್ತವ್ಯಗಳ ಪರಿಪಾಲನೆ, ಆಡಳಿತದ ರೂಪುರೇಷೆಗಳು ಸಂವಿಧಾನದಲ್ಲಿ ಅಡಕವಾಗಿದೆ. ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಪರಿಪಾಲನೆಗೆ ಚ್ಯುತಿಯಾಗದಂತೆ ಸಂವಿಧಾನವು ನಮಗೆ ರಕ್ಷಣೆಯನ್ನು ನೀಡಿ ಪರಿಹಾರವನ್ನು ಕಂಡುಕೊಳ್ಳುವAತೆ ಮಾಡುತ್ತದೆ. ಸಂವಿಧಾನದ ಮೂಲಕವೇ ನಮ್ಮ ಜೀವನವಿದೆ. ಎಲ್ಲಾ ನಾಗರಿಕರನ್ನು ಮುಖ್ಯವಾಹಿನಿಗೆ ತರುವುದು ಸಂವಿಧಾನದ ಆಶಯವಾಗಿದೆ. ನಮ್ಮ ಸಂವಿಧಾವು ಪವಿತ್ರ ಮತ್ತು ಬಲಿಷ್ಠವಾಗಿದೆ. ಸಂವಿಧಾನವನ್ನು ನಮಗೆ ನಾವು ಅರ್ಪಿಸಿಕೊಂಡು ೭೫ ವರ್ಷಗಳು ಸಂದಿವೆ. ಅದನ್ನು ಮತ್ತೊಮ್ಮೆ ನೆನಪಿಸಿಕೊಳ್ಳುವುದು ಸಂವಿಧಾನ ಜಾಗೃತಿ ಜಾಥಾದ ಮುಖ್ಯ ಉದ್ದೇಶವಾಗಿದೆ ಎಂದರು.
ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮ ಪಂಚಾಯತ್‌ನಿAದ ಪುತ್ತೂರು ನಗರಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ವಾಹನವನ್ನು ಪರ್ಲಡ್ಕದಲ್ಲಿ ನಗರಕ್ಕೆ ಸ್ವಾಗತಿಸಲಾಯಿತು. ಬಳಿಕ ವಾದ್ಯಗೋಷ್ಟಿಗಳೊಂದಿಗೆ, ಶಾಲಾ ವಿದ್ಯಾರ್ಥಿಗಳ ಕಾಲ್ನಡಿಗೆ ಜಾಥಾ, ಬೈಕ್ ರ‍್ಯಾಲಿಗಳೊಂದಿಗೆ ಸಭಾ ಕಾರ್ಯಕ್ರಮ ನಡೆದ ಪುತ್ತೂರಿನ ಕಿಲ್ಲೆ ಮೈದಾನದ ಸಮೀಪದಲ್ಲಿರುವ ಶಾಸಕರ ಕಚೇರಿಗೆ ಆವರಣಕ್ಕೆ ತರಲಾಯಿತು. ಅಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಸಿ.ಎಂ ಅವರು ಸಂವಿಧಾನ ಪೀಠಿಕೆಯ ಪ್ರತಿಜ್ಞೆಯನ್ನು ಬೋಧಿಸಿದರು.
ಜಾಥಾದ ವಾಹನದಲ್ಲಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಹಾರಾರ್ಪಣೆ ಮಾಡಿದರು. ಜಾಥಾದಲ್ಲಿ ಸಂವಿಧಾನ ಪಠಣ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆಯ ಪೌರಾಯುಕ್ತ ಮಧು ಎಸ್ ಮನೋಹರ್,ಶಿಕ್ಷಣಾಧಿಕಾರಿ ಲೋಕೇಶ್ ಯಸ್, ಆರ್., ಕಾರ್ಯನಿರ್ವಾಹಣಧಿಕಾರಿ ನವೀನ್ ಭ0ಡಾರಿ, ವಿವಿಧ ಇಲಾಖೆಯ ಅಧಿಕಾರಿಗಳು,ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು,ಉಪಸ್ಥಿತರಿದ್ದರು.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…