ಮುಲ್ಕಿ: ಶಿಕ್ಷಣದ ಜೊತೆಗೆ ಸಾಮಾಜಿಕ ಚಟುವಟಿಕೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯುವ ಜನಾಂಗ ಸನ್ಮಾರ್ಗದಲ್ಲಿ ನಡೆದರೆ ಸಾಧಕರಾಗಲು ಸಾಧ್ಯ ಎಂದು ಮಾಜೀ ಧಾರ್ಮಿಕ ಪರಿಷತ್ ಸದಸ್ಯ ವೇ.ಮೂ. ಪಂಜ ಭಾಸ್ಕರ ಭಟ್ ಹೇಳಿದರು.
ಅವರು ಪಕ್ಷಿಕೆರೆ ಸಮೀಪದ ಪಂಜ ಹರಿಪಾದೆ ಶ್ರೀ ಜಾರಂತಾಯ ದೈವಸ್ಥಾನದ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಶಕ್ತ ಕುಟುಂಬಗಳಿಗೆ ನೀಡಿ ಮಾತನಾಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ನಲ್ಯಗುತ್ತು ಪ್ರಕಾಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಸವಲತ್ತುಗಳನ್ನು ಉಪಯೋಗಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಾಗಿ ರಾಷ್ಟ್ರಕ್ಕೆ ಮಾದರಿಯಾಗಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಜದಗುತ್ತು, ವಿಶ್ವನಾಥ ಶೆಟ್ಟಿ, ದಾಮೋದರ ಶೆಟ್ಟಿ ನಲ್ಯಗುತ್ತು , ಅಶ್ವಿನ್ ಶೆಟ್ಟಿ, ಕುಡುಂಬೂರು, ಶಿವಾಜಿ ಶೆಟ್ಟಿ ನಲ್ಯಗುತ್ತು ಮುಂಬೈ,ಉಮೇಶ್ ಪಂಜ, ಭಾಸ್ಕರ ಶೆಟ್ಟಿ ಹೊಸಮನೆ, ದಿವಾಕರ ಶೆಟ್ಟಿ ನಲ್ಯಗುತ್ತು, ನವೀನ್ ಕುಮಾರ್ ಹರಿಪಾದೆ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಳೆದ ಹಲವಾರು ವರ್ಷಗಳಿಂದ ದೈವದ ಸೇವೆ ಸಲ್ಲಿಸುತ್ತಿರುವ ಉಮೇಶ್ ಪೂಜಾರಿ ಏಳಿಂಜೆ ಹಾಗೂ ಕುಟ್ಟಿ ಪೂಜಾರಿ ರವರನ್ನು ಗೌರವಿಸಲಾಯಿತು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಿಗೆ ಪ್ರತಿಭಾ ಪುರಸ್ಕಾರ ಅಶಕ್ತರಿಗೆ ಸಹಾಯ ಹಸ್ತ ನೀಡಲಾಯಿತು. ಉಮೇಶ್ ಪಂಜ ನಿರೂಪಿಸಿದರು
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…