ಉಡುಪಿ: ಕಸಕ್ಕೆ ಬೆಂಕಿಯಿಡಲು ಹೋಗಿದ್ದ ವೇಳೆ ಮೈಗೆ ಬೆಂಕಿ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕೊಡವೂರಿನಲ್ಲಿ ನಡೆದಿದೆ.
ಮೃತರನ್ನು ಕೊಡವೂರು ನಿವಾಸಿ ಸಾರಾ ದೇವದಾಸ (63) ಎಂದು ಗುರುತಿಸಲಾಗಿದೆ. ಇವರು ಫೆ.13ರಂದು ಮನೆಯ ವಠಾರದ ಕಸದ ರಾಶಿಗೆ ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಸಕ್ಕೆ ಸೀಮೆ ಎಣ್ಣೆ ಹಾಕುವಾಗ ಆಕಸ್ಮಿಕವಾಗಿ ಸೀಮೆಎಣ್ಣೆ ನೈಟಿಗೆ ತಾಗಿ ಸಾರಾ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಮನೆಯವರು ಹೊರಗೆ ಬಂದು ಬೆಂಕಿ ಆರಿಸಿ ನೋಡಿದಾಗ ಸಾರಾ ಅವರ ದೇಹ ಸಂಪೂರ್ಣ ಸುಟ್ಟು ಹೋಗಿತ್ತು. ಕೂಡಲೇ ಅವರನ್ನು ಮಣಿಪಾಲ ಕೆ.ಎಮ್.ಸಿ. ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ರಾತ್ರಿ 11:20ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…