ಉಡುಪಿ ಜಿಲ್ಲೆಯಿಂದ 15 ಸಾವಿರ ಮಂದಿ ಕಾರ್ಯಕರ್ತರು ಭಾಗಿಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿಕೆ.
ಉಡುಪಿ: ಲೋಕಸಭಾ ಚುನಾವಣೆ ಸಿದ್ಧತೆಗಾಗಿ ‘ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ’ವನ್ನು ಇದೇ ಬರುವ ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಉಡುಪಿ ಜಿಲ್ಲೆಯಿಂದ 15 ಸಾವಿರ ಮಂದಿ ಪ್ರಮುಖ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೊದಲಾದವರು ಭಾಗವಹಿಸಲಿದ್ದಾರೆ. ಪ್ರತಿ ಬೂತ್ ಗಳಿಂದ ಕನಿಷ್ಠ 20 ಮಂದಿ ಸೇರಿದಂತೆ 1 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಭಾಸ್ಕರ ರಾವ್ ಕಿದಿಯೂರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…