ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ 6.20 ಕ್ಕೆ ನಡೆದಿದೆ.
ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಅವಳ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ.
ಅವಳ ಆಧಾರ್ ಕಾರ್ಡ್ ನಲ್ಲಿ c/o ಎಮ್.ಗೋವಿಂದರಾಜು ಪಡಸಾಲೆಹಟ್ಟಿ,ಮಿಡಿಗೇಶಿ,ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.
ಅವಳು ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದಾಳೆ.
ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅವಳು ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.
ಅವಳು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮತ್ತು ಅವಳ ವಿಳಾಸ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ.
ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞರಾದ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಎಸ್.ಐ.ದೇವಪ್ಪ ವಿಜಯಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…