ಉಡುಪಿ: ಮಾರುತಿ ಸ್ವಿಫ್ಟ್ ಡಿಸೈರ್ ಕಾರೊಂದು ರಾಯಲ್ ಎನ್‌ಫೀಲ್ಡ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಭಂಡಾರ್ತಿ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಮೃತ ಸವಾರನನ್ನು ಮಹೇಂದ್ರ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಚಿಪ್ಸಿ ಐಟಿ ಸರ್ವಿಸ್ ಪ್ರೈವೇಟ್ ಲಿ. ಕಂಪೆನಿಯ ಉದ್ಯೋಗಿಯಾಗಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ತನ್ನ ರಾಯಲ್ ಎನ್ ಫೀಲ್ಡ್ ಬೈಕ್ ನಲ್ಲಿ ಸೈಬ್ರಕಟ್ಟೆ ಕಡೆಯಿಂದ ಶಿರೂರು ಮೂರುಕೈ ಕಡೆಗೆ ಹೋಗುತ್ತಿದ್ದರು. ಬಿಲ್ಲಾಡಿ ಗ್ರಾಮದ ಭಂಡಾರ್ತಿ ಬಳಿ ತಲುಪಿದಾಗ ಗಣೇಶ್ ಎಂಬಾತ ತನ್ನ ಮಾರುತಿ ಸ್ವಿಫ್ಟ್ ಡಿಸೈರ್ ಕಾರನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಾಯಲ್ ಎನ್ ಫೀಲ್ಡ್ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಮಹೇಂದ್ರ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…