ಮುಲ್ಕಿ: ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ಜ. 17ರಂದು ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶಕ್ಕೆ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು 14 ಪಂಚಾಯತ್ ಹಾಗೂ ಎರಡು ಪಟ್ಟಣ ಪಂಚಾಯತ್ ಹಾಗೂ ಒಂದು ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಸದಸ್ಯರನ್ನು, ಪ್ರತಿಯೊಬ್ಬ ಕಾರ್ಯಕರ್ತರನ್ನು ಭಾಗವಹಿಸಲು ಸಿದ್ಧತೆ ನಡೆಸಲಾಗಿದೆ. ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಸಮಾವೇಶ ನಡೆಯುತ್ತಿದ್ದು ರಾಜ್ಯ ಸರಕಾರದ ಮುಖ್ಯಮಂತ್ರಿ ಸಹಿತ ಅನೇಕ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಯೋಜನೆಯಿಂದ ಸರಕಾರ ಅಭಿವೃದ್ಧಿಯತ್ತ ಸಾಗುತ್ತಿದ್ದು ಕಾರ್ಯಕರ್ತರಿಗೆ ಮತ್ತಷ್ಟು ಬಲ ಬಂದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿದರು.
ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಸರಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ನೋಂದಾವಣೆ ಮಾಡಿದ ಕೀರ್ತಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಸಲ್ಲುತ್ತದೆ ಬಿಜೆಪಿಯವರು ಬಾಯಲ್ಲಿ ಧರ್ಮದ ಪ್ರಚಾರ ಮಾಡುತ್ತಿದ್ದರೆ ನಾವು ಗ್ಯಾರಂಟಿ ಯೋಜನೆ ಮೂಲಕ ಗೆಲುವು ಸಾಧಿಸಿದ್ದೇವೆ ಹಸಿವು ಮುಕ್ತ ಕರ್ನಾಟಕ ಯೋಜನೆ ಯಶಸ್ಸಾಗಿದೆ. ಸಮಾವೇಶಕ್ಕೆ ಕ್ಷೇತ್ರದಿಂದ 55 ಬಸ್ಸುಗಳ ವ್ಯವಸ್ಥೆಯಾಗಿದ್ದು ಸಮಾವೇಶವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕೋ ಆರ್ಡಿನೇಟರ್ ಎಚ್ ವಸಂತ್ ಬರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ನಾಯಕರಾದ ಅಬ್ದುಲ್ ಖಾದರ್, ಬಾಲಚಂದ್ರ ಕಾಮತ್, ಧರ್ಮಾನಂದ ಶೆಟ್ಟಿಗಾರ್,ಮತ್ತಿತರರು ಉಪಸ್ಥಿತರಿದ್ದರು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…