ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ.
36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ನಂ ವನ್ ಜಿಲ್ಲೆಯಾಗಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿತ್ತು. ಬೂತ್ ನಿಂದ ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎಬಿವಿಪಿಯಲ್ಲಿ ತಾಲೂಕು ಅಧ್ಯಕ್ಷರಾಗಿ ನಂತರ ಬಿಜೆಪಿ ಮಂಡಲ ಉಪಾಧ್ಯಕ್ಷರಾಗಿ, ಮಾಧ್ಯಮ ವಕ್ತರಾರಾಗಿ, ಬಿಜೆಪಿ ಯುವಮೋರ್ಚಾದ ಮಂಡಲ ಉಪಾಧ್ಯಕ್ಷರಾಗಿ ನಂತರ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಮಾಧ್ಯಮ ಪ್ರಮುಖರಾಗಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ.ಜೇಸಿಸ್ ಅಧ್ಯಕ್ಷರಾಗಿ, ರೋಟರಿಯಾಕ್ಟ್ ಪದಾಧಿಕಾರಿಯಾಗಿ ಹಾಗು ಅನೇಕ ಸಂಘ ಸಂಸ್ಥೆಗಳಲ್ಲಿ ಸಮಾಜಸಸೇವಕರಾಗಿ ಕೆಲಸ ನಿರ್ವಹಿಸಿದ್ದಾರೆ,ಪುತ್ತೂರು ಬಿಲ್ಲವ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಇವರು ಗ್ರಾಮ ಸಂಚಲನ ಸಮಿತಿ ಸದಸ್ಯರಾಗಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ,ಪುತ್ತೂರು ನಾರಾಯಣ ಗುರು ಮಂದಿರದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದರು, ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು ಜಿಲ್ಲಾ ಮೂರ್ತೆದಾರರ ಮಹಾಮಂಡಳದ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಇವರ ಸಂಘಟನಾ ಕಾರ್ಯಕ್ಕೆ ರಾಜ್ಯಮಟ್ಟದ ಜವಾಬ್ದಾರಿ ಒಲಿದು ಬಂದಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…