ಪುತ್ತೂರು ಮೂಲದ ಅಕ್ಷಯ್ ರೈ ದಂಬೆಕಾನ ರವರು ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್ ಮೀಡಿಯಾ ಕೋ-ಕನ್ವಿನರ್ ಆಗಿ ಆಯ್ಕೆಯಾಗಿದ್ದಾರೆ. ರಾಜ್ಯ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ಪ್ರಶಾಂತ್ ಮಾಕ್ನೂರುರವರು ಇಂದು ಘೋಷಿಸಿರುತ್ತಾರೆ.
ಕಳೆದ ಹನ್ನೆರಡು ವರ್ಷಗಳ ಕಾಲ ಬಿಜೆಪಿ ಯುವಮೋರ್ಚಾದ ಮಂಡಲ ಜಿಲ್ಲೆ ಹಾಗೂ ರಾಜ್ಯದ ಹಲವಾರು ಜವಬ್ದಾರಿಯನ್ನು ನಿಭಾಯಿಸಿ, ಬೆಂಗಳೂರು ಜಿಲ್ಲೆ ಖಜಾಂಜಿಯಾಗಿ ನಂತರ ರಾಜ್ಯದ ಕಾರ್ಯಕಾರಿಣಿ ಸದಸ್ಯರಾಗಿ ತದನಂತರ ಮಾಧ್ಯಮದ ಸಂಚಾಲಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಚುಣಾವಣೆಯ ತಮಿಳುನಾಡು ರಾಜ್ಯದ ವಿಧಾನ ಸಭಾ ಚುಣಾವಣೆಯ ಸಂದರ್ಭದಲ್ಲಿ ಕನ್ಯಾಕುಮಾರಿ ಜಿಲ್ಲೆಯ ಕೊಲಚ್ಚಿಲ್ ಮತ್ತು ನಾರಗಕೋವಿ ಕ್ಷೇತ್ರಗಳ ಪ್ರಭಾರಿಯಾಗಿ ಕೆಲಸ ಮಾಡಿರುತ್ತಾರೆ. ತದನಂತರ ಹಲವಾರು ಎಂ ಎಲ್ ಎ ಮತ್ತು ಎಂಎಲ್ಸಿ ಚುನಾವಣೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡವರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಪ್ರಭಾರಿಯಾಗಿ ಕೆಲಸ ಮಾಡಿದ್ದು, ಇವರ ಮೇಲೆ ಹಲ್ಲೆ ನಡೆದಿದ್ದು,ಈ ಬಗ್ಗೆ ದಾಖಲಾಗಿತ್ತು.
ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಲವಾರು ಜವಬ್ಧಾರಿಗಳನ್ನು ನಿಭಾಯಿಸಿಕೊಂಡು ಬಂದಿರುವ ಅಕ್ಷಯ್ ರೈ ದಂಬೆಕಾನರವರಿಗೆ ಈ ಬಾರಿ ವಿಜಯೇಂದ್ರರವರ ಭಾರತೀಯ ಪಕ್ಷದ ತಂಡದಲ್ಲಿ ಉನ್ನತ ಸ್ಥಾನ ದೊರಕಿರುವುದು ಇವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ. ಅಕ್ಷಯ್ ರೈ ದಂಬೆಕಾನರವರು ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್ ಮೀಡಿಯಾ ಕೋ-ಕನ್ವಿನರ್ ಆಗಿ ಇಂದಿನಿಂದ ಕಾರ್ಯನಿರ್ವಹಿಸಲಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…