ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ “ಭಾಷಾ” ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.
ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(೫೨) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು. ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ “ಭಾಷಾ” ಎಂಬ ಹೆಸರಿನೊಂದಿಗೆ ಖಳನಾಯಕನಾಗಿ ಹೆಸರು ಮಾಡಿದ ವಸಂತ್ ಶೆಟ್ಟಿ ಅವರು ನಂತರ ತುಳು ರಂಗಭೂಮಿಯ ಪ್ರತಿಭಾನ್ವಿತ ಕಲಾವಿದನಾಗಿ ಬೆಳೆದು ಬಂದಿದ್ದರು.
ತೋಡಾರು ಬಂಗಬೆಟ್ಟು ಶಾಲೆಯಲ್ಲಿ 5ನೇ ತರಗತಿಯಲ್ಲಿರುವಾಗಲೇ ನಾಟಕದಲ್ಲಿ ಅಭಿನಯಿಸಿ ನಾಟಕ ರಂಗದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಓದು ಮುಗಿಸಿದ ಬಳಕ ಅವರು ತುಳು ನಾಟಕಗಳಲ್ಲಿ ತೊಡಗಿಸಿಕೊಂಡರು. ‘ಯಶಸ್ವಿ ಕಲಾವಿದೆರ್’ ಮಂಗಳೂರು ತಂಡದ ಸದಸ್ಯರಾಗಿ ಕೆಲವು ನಾಟಕಗಳಲ್ಲಿ ಅಭಿನಯಿಸಿದ್ದರು.
ನಂತರ ‘ನಮ್ಮ ಕಲಾವಿದೆರ್ ಬೆದ್ರ’ ತಂಡಕ್ಕೆ ಸೇರ್ಪಡೆಯಾಗಿ ಜಿಲ್ಲೆಯಾದ್ಯಂತ ಅನೇಕ ತುಳು ನಾಟಕಗಳಲ್ಲಿ ಅಭಿನಯಿಸಿ ಯಶಸ್ವಿ ನಟರಾಗಿ ಬೆಳೆದು ಬಂದರು. ‘ಬೈಲ ಕುರಲ್’, ‘ಮೇಘ ಮುರಾರಿ’, ‘ದೇವರ್ ಮುನಿಂಡ’, ‘ದೇವರ್ ಕೈಬುಡ್ನಗೆ’ ಇವರು ಅಭಿನಯಿಸಿದ ಜನಪ್ರಿಯ ತುಳು ನಾಟಕಗಳು. ಖಳನಾಯಕನ ಪಾತ್ರದ ಮೂಲಕ ಜನಮನ್ನಣೆ ಪಡೆದಿದ್ದ ಅವರು ನಾಯಕ ನಟರಾಗಿ, ಪೋಷಕ ನಟರಾಗಿ ಹಾಗೂ ಹಾಸ್ಯ ಕಲಾವಿದರಾಗಿಯೂ ಅಭಿನಯಿಸಿ ವಿಭಿನ್ನ ಪಾತ್ರಗಳಿಗು ಸೈ ಅನ್ನಿಸಿಕೊಂಡಿದ್ದರು. ಕನ್ನಡ ಟಿ.ವಿ ವಾಹಿನಿಯಲ್ಲಿ ಪ್ರಸಾರಾವಾದ ‘ಗೊತ್ತಾನಗ ಪೊರ್ತಾಂಡ್’ ತುಳು ಧಾರವಾಹಿಯಲ್ಲೂ ಅಭಿನಯಿಸಿದ್ದರು. ತುಳು ರಂಗಭೂಮಿಯಲ್ಲಿ ಸುಮಾರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ವಸಂತ ಶೆಟ್ಟಿ ಎಲ್ಲಾ ಪಾತ್ರಗಳಿಗೂ ಜೀವ ತುಂಬಿದವರು. ಎಡಪದವಿನ ರೆಸ್ಟೋರೆಂಟ್ ಒಂದರಲ್ಲಿ ಸುಮಾರು ೨೦ ವರ್ಷ ಕೆಲಸ ಮಾಡಿದ್ದು ನಂತರ ಮೂಡುಬಿದಿ ರೆಯಲ್ಲಿ ಶಿಕ್ಷಣ ಸಂಸ್ಥೆಯೊಂದರ ಕ್ಯಾಂಟೀನಲ್ಲು ಕೆಲಸ ಮಾಡಿದ್ದರು.
ಅನಾರೋಗ್ಯ ನಿಮಿತ್ತ ಒಂದು ವರ್ಷದಿಂದ ಮನೆಯಲ್ಲಿ ಇದ್ದರು. ಅವರಿಗೆ ಪತ್ನಿ, ಇಬ್ಬರು ಗಂಡು ವ ಮಕ್ಕಳಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…