ಬಂಟ್ವಾಳ : ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ನಡೆದಿದೆ.
ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಎಂಬಾತನೇ ಪಾಣೆಮಂಗಳೂರಿನಲ್ಲಿ ನೇತ್ರಾವತಿಗೆ ಹಾರಲು ಯತ್ನಿಸಿದ ಯುವಕ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.
ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿ ಯುವಕರಾದ ಹನೀಫ್@ಹನೀಫ್ ಬಾಯಿ, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯ ದವಡೆಯಿಂದ ಪಾರು ಮಾಡಿ 112 ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…