ಕಡಬ: ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ.
ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವಾಸುದೇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…