ಬಂಟ್ವಾಳ: ಬಂಟ್ಚಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಬಿಸಿರೋಡಿನ ಕಂದಾಯ ಇಲಾಖೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶಿಲ್ದಾರ್ ಅರ್ಚನಾ ಭಟ್ ವಹಿಸಿ ಮಾತನಾಡಿ, ಸರ್ವಜ್ಞ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ಅವರು ಸರ್ವರಿಗೂ ಆದರ್ಶಪ್ರಾಯವಾದ ಶ್ರೇಷ್ಠ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಸರ್ವಜ್ಞನ ಶ್ರೇಷ್ಠ ಜ್ಞಾನವನ್ನು ಮುಂದಿನ ಜನಾಂಗಕ್ಕೆ ಹೇಗೆ ತಿಳಿಸಿಕೊಡಬಹುದು ಎಂಬ ವಿಚಾರದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಸರಕಾರ ಇಂತಹ ಶ್ರೇಷ್ಠ ವ್ಯಕ್ತಿಗಳ ಆಚರಣೆ ಮಾಡಿರುವ ಸಂಗತಿ ಅತ್ಯಂತ ಸಂತಸದ ವಿಚಾರ ಎಂದು ತಿಳಿಸಿದರು.
ವಕೀಲರಾದ ಸುರೇಶ್ ನಾವೂರ ಮಾತನಾಡಿ, ಸಮಾಜದ ಅಂಕುಡೊಂಕುಗಳ ನಿವಾರಣೆಗಾಗಿ ಹೋರಾಟ ಮಾಡಿದ ಮಹಾನುಭಾವ ಸರ್ವಜ್ಞರು ಎಂದು ಅವರು ತಿಳಿಸಿದರು. ಇಂತಹ ಶ್ರೇಷ್ಠ ವ್ಯಕ್ತಿಗಳ ವ್ಯಕ್ತಿತ್ವವನ್ನು, ಆದರ್ಶಗಳನ್ನು ಅಳವಡಿಸಿಕೊಂಡರೆ ಜೀವನ ಮೌಲ್ಯ ವೃದ್ದಿಯಾಗುತ್ತದೆ,ಕಾರ್ಯಕ್ರಮಗಳು ಅರ್ಥಪೂರ್ಣವಾಗಬಹುದು ಎಂದು ಅವರು ತಿಳಿಸಿದರು. ವೇದಿಕೆಯಲ್ಲಿ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಯುವ ವೇದಿಕೆ ಅದ್ಯಕ್ಷ ನಿತೀಸ್ ಪಲ್ಲಿಕಂಡ, ರಾಜ್ಯ ಕುಲಾಲ ಕುಂಬಾರ ಮಹಿಳಾ ಸಂಘದ ಅದ್ಯಕ್ಷೆ ನಳಿನಿಮಹಾಬಲ ಯುವ ವೇದಿಕೆ ಮಹಿಳಾ ಸಂಘದ ಅಧ್ಯಕ್ಷೆ ವಿಜಯಶ್ರೀ ಪುರುಷೋತ್ತಮ , ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ಉಪತಹಶೀಲ್ದಾರ್ ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕ ವಿಜಯ ಆರ್,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ಜನಾರ್ದನ ಜೆ.ಸ್ವಾಗತಿಸಿದರು. ಶ್ರೀಕಲಾ ವಂದಿಸಿದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…