ಜನ ಮನದ ನಾಡಿ ಮಿಡಿತ

Advertisement

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಮಾನಹಾನಿಕರ ಸಂದೇಶ ರವಾನೆ; ಮೂವರ ವಿರುದ್ಧ ದೂರು ದಾಖಲು

ಮಂಗಳೂರು: ಕಳೆದ ಶನಿವಾರದಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶದ ಭಾಗವಾಗಿ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿಸಿ ಮಾನಹಾನಿಕರ ಸಂದೇಶಗಳನ್ನು ರವಾನಿಸಿರುವ ಆರೋಪದಡಿ ಜೆಡಿಎಸ್ ಪಕ್ಷದ ನಾಯಕ ಮೊಹಿದೀನ್ ಬಾವ ಅವರ ಬೆಂಬಲಿಗರು ಎನ್ನಲಾದ ಮೂವರ ವಿರುದ್ಧ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುರತ್ಕಲ್ ಹಾಗೂ ಬಜಪೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Ex MLA Dr.MBava Fans ವಾಟ್ಸಾಪ್ ಗ್ರೂಪ್ ಗೆ 9980385002 ನಂಬರಿನ ಮುನಾವರ್ ಯಾನೆ ಶರೀಫ್, MOHOYUDDIN BAVA Fans ಹೆಸರಿನ ವಾಟ್ಸಾಪ್ ಗ್ರೂಪ್ ಗೆ 9535436033 ನಂಬರಿನ ಮೊಹಮ್ಮದ್ ಇಮ್ರಾನ್ ಚೊಕ್ಕಬೆಟ್ಟು ಮತ್ತು 2023 ಶಾಸಕರು ಮೊಯಿದ್ದಿನ ಭಾವ ವಾಟ್ಸಾಪ್ ಗ್ರೂಪ್ ಗೆ 9902174580 ನಂಬರಿನ ಶಯಾನ್ ಹೆಸರಿನ ಆರೋಪಿಗಳ ಮೇಲೆ ದೂರು ದಾಖಲಾಗಿದೆ.

ಈ‌ ಸಂಧರ್ಭದಲ್ಲಿ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಪುರುಷೋತ್ತಮ ಚಿತ್ರಾಪುರ, ಸದಾಶಿವ ಶೆಟ್ಟಿ, ಶಶಿಕಲಾ ಪದ್ಮನಾಭ, ಬಶೀರ್ ಬೈಕಂಪಾಡಿ, ಶಮೀರ್ ಕಾಟಿಪಳ್ಳ, ಸತ್ತಾರ್ ಕೃಷ್ಣಾಪುರ, ರಾಜೇಶ್ ಕುಳಾಯಿ, ಜಲೀಲ್ ಬದ್ರಿಯಾ, ಹೇಮಂತ್, ಚಂದ್ರಹಾಸ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇದೇ ವೇಳೆ ಬಜಪೆ ಪೋಲಿಸ್ ಠಾಣೆಯಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಆರ್.ಕೆ.ಪೃಥ್ವಿರಾಜ್, ಕೃಷ್ಣ ಅಮೀನ್, ಯು.ಪಿ.ಇಬ್ರಾಹಿಂ, ಮೆಲ್ವಿನ್, ಬಾಷ ಗುರುಪುರ, ರಾಜ್ ಕುಮಾರ್ ಶೆಟ್ಟಿ, ಸಿರಾಜ್ ಮೋನು, ಮುಸ್ತಫಾ ಗಂಜೀಮಠ, ಶರೀಫ್ ಉಳಾಯಿಬೆಟ್ಟು, ಎ.ಕೆ.ಹಾರಿಸ್, ಶೇಖ್ ಕಂದಾವರ ಹಾಗೂ ಇಸಾಕ್ ಉಳಾಯಿಬೆಟ್ಟು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!