ಮಂಗಳೂರು: ಕಳೆದ ಶನಿವಾರದಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶದ ಭಾಗವಾಗಿ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿಸಿ ಮಾನಹಾನಿಕರ ಸಂದೇಶಗಳನ್ನು ರವಾನಿಸಿರುವ ಆರೋಪದಡಿ ಜೆಡಿಎಸ್ ಪಕ್ಷದ ನಾಯಕ ಮೊಹಿದೀನ್ ಬಾವ ಅವರ ಬೆಂಬಲಿಗರು ಎನ್ನಲಾದ ಮೂವರ ವಿರುದ್ಧ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುರತ್ಕಲ್ ಹಾಗೂ ಬಜಪೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Ex MLA Dr.MBava Fans ವಾಟ್ಸಾಪ್ ಗ್ರೂಪ್ ಗೆ 9980385002 ನಂಬರಿನ ಮುನಾವರ್ ಯಾನೆ ಶರೀಫ್, MOHOYUDDIN BAVA Fans ಹೆಸರಿನ ವಾಟ್ಸಾಪ್ ಗ್ರೂಪ್ ಗೆ 9535436033 ನಂಬರಿನ ಮೊಹಮ್ಮದ್ ಇಮ್ರಾನ್ ಚೊಕ್ಕಬೆಟ್ಟು ಮತ್ತು 2023 ಶಾಸಕರು ಮೊಯಿದ್ದಿನ ಭಾವ ವಾಟ್ಸಾಪ್ ಗ್ರೂಪ್ ಗೆ 9902174580 ನಂಬರಿನ ಶಯಾನ್ ಹೆಸರಿನ ಆರೋಪಿಗಳ ಮೇಲೆ ದೂರು ದಾಖಲಾಗಿದೆ.
ಈ ಸಂಧರ್ಭದಲ್ಲಿ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಪುರುಷೋತ್ತಮ ಚಿತ್ರಾಪುರ, ಸದಾಶಿವ ಶೆಟ್ಟಿ, ಶಶಿಕಲಾ ಪದ್ಮನಾಭ, ಬಶೀರ್ ಬೈಕಂಪಾಡಿ, ಶಮೀರ್ ಕಾಟಿಪಳ್ಳ, ಸತ್ತಾರ್ ಕೃಷ್ಣಾಪುರ, ರಾಜೇಶ್ ಕುಳಾಯಿ, ಜಲೀಲ್ ಬದ್ರಿಯಾ, ಹೇಮಂತ್, ಚಂದ್ರಹಾಸ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಇದೇ ವೇಳೆ ಬಜಪೆ ಪೋಲಿಸ್ ಠಾಣೆಯಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಆರ್.ಕೆ.ಪೃಥ್ವಿರಾಜ್, ಕೃಷ್ಣ ಅಮೀನ್, ಯು.ಪಿ.ಇಬ್ರಾಹಿಂ, ಮೆಲ್ವಿನ್, ಬಾಷ ಗುರುಪುರ, ರಾಜ್ ಕುಮಾರ್ ಶೆಟ್ಟಿ, ಸಿರಾಜ್ ಮೋನು, ಮುಸ್ತಫಾ ಗಂಜೀಮಠ, ಶರೀಫ್ ಉಳಾಯಿಬೆಟ್ಟು, ಎ.ಕೆ.ಹಾರಿಸ್, ಶೇಖ್ ಕಂದಾವರ ಹಾಗೂ ಇಸಾಕ್ ಉಳಾಯಿಬೆಟ್ಟು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…