ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆ ಹೃದಯಸ್ಪರ್ಶಿ ಸನ್ನವೇಶಕ್ಕೆ ಸಾಕ್ಷಿಯಾಯಿತು.
ಫೆ.19ರಂದು ಮಧ್ಯಾಹ್ನ ಮಣಿಕ್ಕರ ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದವರನ್ನು ನೆನಪಿಸುವ ಕಿರು ನಾಟಕ ನಡೆಯಿತು.
ಈ ಸಂಧರ್ಭದಲ್ಲಿ ಮಣಿಕ್ಕರ ಶಾಲೆಗೆ 2 ಕೊಠಡಿಗಳನ್ನು ನಿರ್ಮಿಸಿಕೊಟ್ಟ ಹಾಗೂ ವಿವಿಧ ಯೋಜನೆಗಳಿಗೆ ಕೈ ಜೋಡಿಸಿರುವ ಶಾಲಾ ಹಿರಿಯ ವಿದ್ಯಾರ್ಥಿ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಅವರಿಗೆ ಕೃತಜ್ಞತೆ ಸಲ್ಲಿಸುವ ಸನ್ನಿವೇಶ ಹೃದಯಸ್ಪರ್ಶಿಯಾಗಿತ್ತು.
ಶಾಲಾ ಮಕ್ಕಳಿಂದ ಹಿಡಿದು ಶಿಕ್ಷಕರು ,ಪೋಷಕರು ಸಂತೋಷ್ ಕುಮಾರ್ ರೈ ಅವರನ್ನು ಗುಲಾಬಿ ಹೂವುಗಳನ್ನು ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ರೈ ಅವರ ಅಕ್ಕ ಮಣಿಕ್ಕರ ಶಾಲಾ ಹಿರಿಯ ವಿದ್ಯಾರ್ಥಿನಿ ಡಾ.ಸುಚೇತಾ ಜೆ.ಶೆಟ್ಟಿ ,ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ.ವೀಣಾ ಸಂತೋಷ್ ರೈ ,ಪುತ್ರಿ ಪ್ರಿಶಾ ರೈ ಮೊದಲಾದವರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…