ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತರೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳ ಬಂಧನ!

ಸಾಕಷ್ಟು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಜನಾಡಿಯ ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಮಂಗಳೂರು ನಗರ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬೇರೆ ಬೇರೆ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿಯನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಬಂಧಿಸಲಾಗಿದೆ. ಮಂಗಳೂರು ನಗರ ಹಾಗೂ ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟದ 10 ಪ್ರಕರಣಗಳಲ್ಲಿ ಭಾಗಿಯಾಗಿರುವ ಹಾಫಿಸ್ ಜಾಮೀನಿನ ಮೇಲೆ ಬಿಡುಗಡೆಯಾಗಿ ಪರಾರಿಯಾಗಿದ್ದ.
ಇನ್ನು ಮೊಹಮ್ಮದ್ ಅಬ್ದುಲ್ ಫಯಾನ್ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಅಪರಾಧ ಚಟುವಟಿಕೆಗಳು ಕೊಣಾಜೆ, ಉಳ್ಳಾಲ, ಬಂಟ್ವಾಳ ಟೌನ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಹಲವು ನ್ಯಾಯಾಲಯದ ವಾರಂಟ್‌ಗಳ ಹೊರತಾಗಿಯೂ, ಫಯಾನ್ ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವವರೆಗೂ ತಪ್ಪಿಸಿಕೊಳ್ಳುತ್ತಿದ್ದ. ಇಬ್ಬರನ್ನೂ ಮುಂದಿನ ಕಾನೂನು ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!