ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಕದಳಿ ಬೀಚ್ ಟೂರಿಸಂ ಸಹಕಾರದೊಂದಿಗೆ ದಿನಾಂಕ ಮಾರ್ಚ್ ಒಂದರಿಂದ ಮೂರರವರೆಗೆ ಮೂರು ದಿನಗಳ ಕಾಲ ಮಂಗಳೂರು ಪಣಂಬೂರಿನ( ಪಣಂಬೂರು ಬೀಚ್ ) ಕಡಲಕಿನಾರೆಯಲ್ಲಿ ಹಮ್ಮಿಕೊಂಡಿರುವ “ಜಾನಪದ ಕಡಲೋತ್ಸವ” ಎಂಬ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಕಡಲೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದ ರಾಜ್ಯಪಾಲರು ಉದ್ಘಾಟಿಸಲಿದ್ದು ಕಾರ್ಯಕ್ರಮದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಮೈಸೂರು ಇವರನ್ನು ಸನ್ಮಾನಿಸಲಾಗುವುದು ಎಂದು ಜಾನಪದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಲ್ ಬೈಲ್ ತಿಳಿಸಿದ್ದಾರೆ.
ಕಡಲೋತ್ಸವ ಕಾರ್ಯಕ್ರಮದಲ್ಲಿ ಜಾನಪದ ಪ್ರದರ್ಶನ, ಜಾನಪದ ಕಾರ್ಯಕ್ರಮ, ಆಹಾರ ಮೇಳ, ಗಾಳಿಪಟ ಉತ್ಸವ ವಿಶೇಷ ಆಕರ್ಷಣೆಯಾಗಿದ್ದು, ಕ್ರಮವಾಗಿ ಮೂರು ದಿನಗಳಲ್ಲಿ ಡಾ.ರಮೇಶ್ಚಂದ್ರ ಮತ್ತು ಕಲಾವತಿ ಬಳಗದವರಿಂದ ಜಾನಪದ ರಸ ಸಂಜೆ ಸಂಗೀತ ಕಾರ್ಯಕ್ರಮ, ಅಜಯ್ ವಾರಿಯರ್ ಮತ್ತು ತಂಡದವರಿಂದ ಸಂಗೀತರಸಮಂಜರಿ, ಹಾಗೂ ಮಣಿಕಾಂತ್ ಕದ್ರಿ ತಂಡದಿಂದ ಕಡಲಗೀತೆ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಾನಪದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್ ವಿನಂತಿಸಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಆಶಯದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು, ಜಾನಪದ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರ ಆದೇಶದಂತೆ ಜಿಲ್ಲೆಯ ಎಲ್ಲಾ ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆಯೂ ಯಾವುದೇ ಗೊಂದಲಗಳಿಲ್ಲದೆ ನೆರವೇರಿದ್ದು, ಈಗಾಗಲೇ ಜಿಲ್ಲೆಯ ಎಲ್ಲಾ ಘಟಕಗಳು ಕಾರ್ಯಪ್ರವೃತ್ತರಾಗಿವೆ.
ಜಾನಪದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರುಗಳು, ಸಂಚಾಲಕರು, ಕಾರ್ಯದರ್ಶಿ, ಸಹಿತ ಎಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲೆಯ ಇತರ ತಾಲೂಕು ಜಾನಪದ ಘಟಕಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳಿಗೆ ಜಾನಪದ ಕಡಲೋತ್ಸವ ಯಶಸ್ವಿಯಾಗುವ ಸಲುವಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು,ಕಾರ್ಯಕ್ರಮದ ಸಿದ್ಧತೆ ಭರದಿಂದ ಸಾಗಿದೆ ಎಂದು ವರದಿಯಾಗಿದೆ.
ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ನಗರದಲ್ಲಿ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದ್ದು, ಸಂಪೂರ್ಣ ಸಿದ್ಧತೆ ಬಗ್ಗೆ ಚರ್ಚೆಯಾಗಲಿದೆ, ಎಂದು ಸಂಘಟಕರು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…