ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ಅಪರಿಚಿತ ಮಹಿಳೆಯರಿಂದ 1 ವರ್ಷದ ಮಗುವಿನ ಅಪಹರಣಕ್ಕೆ ಯತ್ನ


ಮನೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರಿಬ್ಬರು 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ನಡೆದಿದೆ.


ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಾರೆ. ಬಳಿಕ ಮನೆಯವರ ವಿರೋಧದ ನಡುವೆಯೂ ಸೀದಾ ಮನೆಯೊಳಗೆ ಬಂದು ಮಹೀಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು ಅಪರಿಚಿತ ಹೆಂಗಸು ಎತ್ತಿಕೊಂಡು ಹೋದ ಮಗುವನ್ನು ಕರೆದುಕೊಂಡು ಬಂದಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!