ನಿನ್ನೆ ಶಾಲೆಗೆಂದು ಹೋಗಿ ತದನಂತರ ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ.
ಮೃತ ಮಕ್ಕಳನ್ನು ಯಶ್ಚಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ್ ಅವರ ಪುತ್ರ ರಾಘವೇಂದ್ರ(15), ವಿಶ್ವನಾಥ್ ಅವರ ಪುತ್ರ ನಿರೂಪ(15), ದೇವದಾಸ್ ಅವರ ಮಗ ಅನ್ವಿತ್(15) ಎಂದು ಗುರುತಿಸಲಾಗಿದೆ.
ಈ ನಾಲ್ವರು ವಿದ್ಯಾರ್ಥಿಗಳು ಖಾಸಗಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದ ಬಳಿಕ 1:30ರ ನಂತರ ನಾಪತ್ತೆಯಾಗಿದ್ದರು.
ನಾಪತ್ತೆ ಪ್ರ ಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕ ಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾ ವಳಿಗಳನ್ನು ತರಿಸಿಕೊಂಡಿದ್ದರು. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿದ್ದರು. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥ ಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ನಗರದ ವೆನ್ ಲಾಕ್ ಆಸ್ಪತ್ರೆ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…