ಜನ ಮನದ ನಾಡಿ ಮಿಡಿತ

Advertisement

25 ಮಂದಿಯ ತಂಡದಿಂದ ಮೀನುಗಾರಿಕಾ ಬೋಟ್ ಅಪಹರಣ

ಮಲ್ಪೆ: 25 ಮಂದಿಯ ತಂಡದಿಂದ ಮೀನುಗಾರಿಕಾ ಬೋಟ್ ಅಪಹರಣ: ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಸುಲಿಗೆ


ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ಬೋಟ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಅನ್ನು ಅಪರಿಚಿತ 25 ಮಂದಿಯ ತಂಡವೊಂದು ಸುಲಿಗೆ ಮಾಡಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣನಂದನ ಎಂಬ ಲೈಲಾನ್‌ ಬೋಟ್‌ ನಲ್ಲಿ ಫೆ. 19ರಂದು ನಾಗರಾಜ್‌ ಹರಿಕಾಂತ, ನಾಗರಾಜ್‌ ಹೆಚ್.‌ ಹರಿಕಾಂತ, ಅರುಣ್‌ ಹರಿಕಾಂತ ಅಂಕೋಲ, ಅಶೋಕ ಕುಮುಟ, ಕಾರ್ತಿಕ್‌ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಸುಬ್ರಮಣ್ಯ ಖಾರ್ವಿ ಅವರು ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಫೆ. 27ರಂದು ಮೀನುಗಾರಿಕೆ ಮುಗಿಸಿಕೊಂಡು ಮಲ್ಪೆ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಬೋಟ್ ಫ್ಯಾನ್‌ ಗೆ ಬಲೆ ಸಿಲುಕಿಕೊಂಡ ಕಾರಣ ಬೋಟ್‌ ಬಂದ್‌ ಆಗಿ ನಿಂತಿತ್ತು. ಈ ಸಂದರ್ಭದಲ್ಲಿ ಸುಮಾರು 25 ಮಂದಿಯ ತಂಡವೊಂದು ಏಕಾಏಕಿ ದಾಳಿ ಮಾಡಿ ಬೋಟ್ ಅನ್ನು ತೀರಕ್ಕೆ ಎಳೆದುಕೊಂಡು ಹೋಗಿದ್ದಾರೆ. ಬಳಿಕ ಬೋಟ್ ನಲ್ಲಿದ್ದ ಮೀನುಗಾರರನ್ನು ಅಪಹರಿಸಿ, ಸುಮಾರು 8 ಲಕ್ಷ ಮೌಲ್ಯದ ಮೀನು ಹಾಗೂ ಬೋಟ್‌ ಗೆ ತುಂಬಿಸಿದ 5,76,700 ರೂ. ಮೌಲ್ಯದ 7,500 ಲೀಟರ್‌ ಡೀಸೆಲ್‌ ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಚೇತನ್‌ ಸಾಲಿಯಾನ್‌ ಅವರು ನೀಡಿರುವ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!