ಮಲ್ಪೆ: 25 ಮಂದಿಯ ತಂಡದಿಂದ ಮೀನುಗಾರಿಕಾ ಬೋಟ್ ಅಪಹರಣ: ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಸುಲಿಗೆ
ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ಬೋಟ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಅನ್ನು ಅಪರಿಚಿತ 25 ಮಂದಿಯ ತಂಡವೊಂದು ಸುಲಿಗೆ ಮಾಡಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣನಂದನ ಎಂಬ ಲೈಲಾನ್ ಬೋಟ್ ನಲ್ಲಿ ಫೆ. 19ರಂದು ನಾಗರಾಜ್ ಹರಿಕಾಂತ, ನಾಗರಾಜ್ ಹೆಚ್. ಹರಿಕಾಂತ, ಅರುಣ್ ಹರಿಕಾಂತ ಅಂಕೋಲ, ಅಶೋಕ ಕುಮುಟ, ಕಾರ್ತಿಕ್ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಸುಬ್ರಮಣ್ಯ ಖಾರ್ವಿ ಅವರು ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಫೆ. 27ರಂದು ಮೀನುಗಾರಿಕೆ ಮುಗಿಸಿಕೊಂಡು ಮಲ್ಪೆ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಬೋಟ್ ಫ್ಯಾನ್ ಗೆ ಬಲೆ ಸಿಲುಕಿಕೊಂಡ ಕಾರಣ ಬೋಟ್ ಬಂದ್ ಆಗಿ ನಿಂತಿತ್ತು. ಈ ಸಂದರ್ಭದಲ್ಲಿ ಸುಮಾರು 25 ಮಂದಿಯ ತಂಡವೊಂದು ಏಕಾಏಕಿ ದಾಳಿ ಮಾಡಿ ಬೋಟ್ ಅನ್ನು ತೀರಕ್ಕೆ ಎಳೆದುಕೊಂಡು ಹೋಗಿದ್ದಾರೆ. ಬಳಿಕ ಬೋಟ್ ನಲ್ಲಿದ್ದ ಮೀನುಗಾರರನ್ನು ಅಪಹರಿಸಿ, ಸುಮಾರು 8 ಲಕ್ಷ ಮೌಲ್ಯದ ಮೀನು ಹಾಗೂ ಬೋಟ್ ಗೆ ತುಂಬಿಸಿದ 5,76,700 ರೂ. ಮೌಲ್ಯದ 7,500 ಲೀಟರ್ ಡೀಸೆಲ್ ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಚೇತನ್ ಸಾಲಿಯಾನ್ ಅವರು ನೀಡಿರುವ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…