ಹಳೆಯಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಲಕ್ಷ್ಮಣ್ ಸಾಲ್ಯಾನ್ ಕೆರೆಕಾಡು,ಕಾರ್ಯದರ್ಶಿಯಾಗಿ ಜೀವನ್ ಶೆಟ್ಟಿ ಅಂಗರಗುಡ್ಡೆ ಆಯ್ಕೆ ಮೂಲ್ಕಿ ಮೂಡಬಿದಿರೆ ಭಾರತೀಯ ಜನತಾ ಪಕ್ಷದ ಹಳೆಯಂಗಡಿ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಲಕ್ಷ್ಮಣ್ ಸಾಲ್ಯಾನ್ ಕೆರೆಕಾಡು ಹಾಗೂ ಕಾರ್ಯದರ್ಶಿಯಾಗಿ ಯುವನಾಯಕ ಜೀವನ್ ಶೆಟ್ಟಿ ಅಂಗಾರಗುಡ್ಡೆ ಆಯ್ಕೆಯಾಗಿದ್ದಾರೆ ಎಂದು ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್ ಪ್ರಕಟಿಸಿದ್ದಾರೆ.
ಕೆರೆಕಾಡು ಬೆಳ್ಳಾಯರು ನಿವಾಸಿ ಲಕ್ಷ್ಮಣ್ ಸಾಲ್ಯಾನ್ ಅವರು ಈಗಾಗಲೇ ಬೆಳ್ಳಾಯರು ಶಕ್ತಿ ಕೇಂದ್ರದ ಪ್ರಮುಖರಾಗಿ ಸಾಕಷ್ಟು ಅನುಭವ ಹೊಂದಿದ್ದು,ಸ್ಧಳೀಯ ಸಾರ್ವಜನಿಕ ಹಿಂದೂ ರುದ್ರಭೂಮಿಯ ಅಧ್ಯಕ್ಷರಾಗಿ ರುದ್ರಭೂಮಿಯ ಪ್ರಗತಿಗೆ ಶ್ರಮಿಸುತ್ತಿದ್ದಾರೆ.
ಎಲ್ ಐಸಿ ಏಜೆಂಟರಾಗಿ ಮೂಲ್ಕಿ ಯೂನಿಯನ್ ಅಧ್ಯಕ್ಷರಾಗಿಯೂ ಸಂಘಟನಾತ್ಮಕವಾಗಿ ತೊಡಗಿಸಿಕೊಂಡಿದ್ದು,ಕಿನ್ನಿಗೋಳಿ ಪರಿಸರದಲ್ಲಿ ಕೋಳಿ ಮಾರಟದ ಉದ್ಯಮಿಯಾಗಿರುವ ಅವರಿಗೆ ಈ ನೂತನ ಜವಬ್ಧಾರಿಯನ್ನು ಬಿಜೆಪಿ ಕಾರ್ಯಕರ್ತರು ಮುಕ್ತವಾಗಿ ಸ್ವಾಗತಿಸಿದ್ದಾರೆ ಹಾಗೇ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ ಜೀವನ್ ಶೆಟ್ಟಿ ತಮ್ಮ ಅವಧಿಯಲ್ಲಿ ಗ್ರಾಮದ ಸಮಸ್ಯೆಗಳ ಪರಿಹಾರಕ್ಕೆ ಪ್ರಮಾಣಿಕವಾಗಿ ದುಡಿದಿದ್ದು.ತುಳು ಲಿಪಿಯಲ್ಲಿ ನಾಮಫಲಕವನ್ನು ಅಳವಡಿಸಿ ಎಲ್ಲರ ಗಮನ ಸೆಳೆದಿದ್ದರು.ಬಡ ಮಹಿಳೆಗೆ ಸೂರು ನಿರ್ಮಿಸಿ ಕೊಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸ್ನೇಹಿತರ ಮೂಲಕ ಬಡವರಿಗೆ ನೆರವು ನೀಡುವಲ್ಲಿ ಮುಂಚೂಣಿಯಲ್ಲಿದ್ದಾರೆ.ದಿ ಸುಖಾನಂದ ಶೆಟ್ಟಿ ಸ್ಮರಣಾರ್ಧ ಕ್ರೀಡಾ ಸಂಘಟನೆ,ಸಮಾಜಸೇವೆ ಹಾಗೂ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿ ಸಮಾಜಕ್ಕೆ ಅರ್ಪಿಸಿದ್ದಾರೆ.ಅವರ ಸಂಘಟನಾ ಚತುರತೆಗೆ ಅರ್ಹವಾಗಿಯೇ ಕಾರ್ಯದರ್ಶಿ ಹುದ್ದೆ ದೊರಕಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರಶಂಸಿದ್ದಾರೆ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…