ಕಡಬ : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ.
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(೨೦ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ, ಅಂಗನವಾಡಿ ಕಾರ್ಯಕರ್ತೆಯೂ ಆಗಿರುವ ಯಮುನಾಕೇಶವ ಗಾಂಧಿಪೇಟೆ ಅವರ ಮನೆಗೆ ಬಂದು ರಾತ್ರಿ ಅಲ್ಲಿಂದ ಆಲಂಕಾರು ಸಮೀಪದ ನೆಕ್ಕರೆಯಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಬೈಕ್‌ಗೆ ಪೆಟ್ರೋಲ್ ತುಂಬಿಸಿ ಮತ್ತೆ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್(ಜೀತ್) ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಶ್ರೀಜಿಸ್‌ರವರು ತಂದೆ ಗುರುವಪ್ಪ, ತಾಯಿ ಗಿರಿಜಾ, ಸಹೋದರರಾದ ಸುನೀಶ್ ಹಾಗೂ ಸುಜಿಸ್‌ರವರನ್ನು ಅಗಲಿದ್ದಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…