ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಬಿಲ್ಲವ ಸಂಘದ ಬಳಿ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು ಹಳೆಯಂಗಡಿ ಕಲ್ಲಾಪು ಬಳಿಯ ನಿವಾಸಿ ವಾರಿಜಾ ಶೆಟ್ಟಿಗಾರ (55) ಎಂದು ಗುರುತಿಸಲಾಗಿದೆ
ಮೃತ ವಾರಿಜಾ ಶೆಟ್ಟಿಗಾರ್ ಪೂನಾದಲ್ಲಿ ಪುತ್ರನೊಂದಿಗೆ ನೆಲೆಸಿದ್ದು ಪಡುಪಣಂಬೂರು ಕಲ್ಲಾಪು ಜಾತ್ರೆಗೆ ಬಂದಿದ್ದರು.

ತುರ್ತು ಕೆಲಸ ನಿಮಿತ್ತ ಮನೆಯಿಂದ ಹಳೆಯಂಗಡಿ ಪೇಟೆಗೆ ತೆರಳುತ್ತಿದ್ದ ವೇಳೆ ಹೆದ್ದಾರಿ ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ



