ಜನ ಮನದ ನಾಡಿ ಮಿಡಿತ

Advertisement

ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ ಎಬಿವಿಪಿಯಿಂದ ಪ್ರತಿಭಟನೆ

ಕಡಬ :ಕಾಲೇಜಿನ ಮೂವರು ವಿದ್ಯಾರ್ಥಿನಿಯರಿಗೆ ಕೇರಳದ ಯುವಕನೊಬ್ಬ ಆ್ಯಸಿಡ್ ಎರಚಿದ ಘಟನೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಡಬ ಶಾಖೆಯ ವತಿಯಿಂದ ಕಡಬ ಮುಖ್ಯ ರಸ್ತೆಯ ಜಂಕ್ಷನ್‌ನಲ್ಲಿ ಮಂಗಳವಾರ ಸಂಜೆ ಪ್ರತಿಭಟನೆ ನಡೆಯಿತು.

ಎಬಿವಿಪಿಯ ಮಂಗಳೂರು ವಿಭಾಗದ ಸಂಘಟನಾ ಕಾರ್ಯದರ್ಶಿ ಶ್ರೀರಾಂ ಅಂಗಿರಸ ಮಾತನಾಡಿ, ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಎಸಗಿರುವುದು ಅತ್ಯಂತ ಅಮಾನುಷವಾಗಿದೆ. ಯಾವ ಆರೋಪಿ ತನ್ನ ವಿಕೃತ ಮನಸ್ಥಿತಿಯಿಂದ ಈ ಘಟನೆಯನ್ನು ನಡೆಸಿರುತ್ತಾನೋ ಆತನಿಗೆ ಹಾಗೂ ಆತನಿಗೆ ಸಹಕರಿಸಿದವರಿಗೆ ಕಠಿಣ ಶಿಕ್ಷೆ ನೀಡಬೇಕು, ಈ ಮೂಲಕ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆಯು ಜಿಲ್ಲೆಯ ಎಲ್ಲಾ ಕಾಲೇಜು

ವಿದ್ಯಾರ್ಥಿನಿಯರಿಗೆ ಒಂದು ಸುರಕ್ಷಿತ ವಾತಾವರಣವನ್ನು ನಿರ್ಮಾಣ ಮಾಡಬೇಕು ಎಂದರು.

ಎಬಿವಿಪಿ ಕಾರ್ಯಕರ್ತೆ ಪುಣ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಹೇಮಂತ್ ಸುಬ್ರಹ್ಮಣ್ಯ ಸ್ವಾಗತಿಸಿದರು. ಸ್ಫೂಡೆಂಟ್ ಡೆವಲಪ್‌ಮೆಂಟ್ ಪ್ರಮುಖ್ ಚೈತ್ರಾ ವಂದಿಸಿದರು. ಪ್ರತಿಭಟನೆಯ ಬಳಿಕ ಕಡಬ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರು ತೆರಳಿ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು, ಉಪ ತಹಸೀಲ್ದಾರ್ ಮನೋಹರ್ ಕೆ.ಟಿ. ಮನವಿ ಸ್ವೀಕರಿಸಿದರು. ಈ ಸಂದರ್ಭ ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಎಬಿವಿಪಿ ತಾಲೂಕು ಸಂಚಾಲಕ ಸುಹಾಸ್ ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!