ಕಡಬ :ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 10 ಲಕ್ಷ ರೂ.ಪರಿಹಾರ ಮತ್ತು ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕೆಂದು ಆಗ್ರಹಿಸಿತು.
ಕಡಬ ತಾಲೂಕು ಆಡಳಿತ ಸೌಧಕ್ಕೆ ಮಂಗಳ ವಾರ ಭೇಟಿ ನೀಡಿದ ಬಿಜೆಪಿ ಯುವ ಮೋರ್ಚಾ ಪ್ರಮುಖರ ನಿಯೋಗವು ತಹಸೀಲ್ದಾರ್ ಕಚೇರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು. ಸುಳ್ಯ ಶಾಸಕಿ ಭಾಗೀರಥಿ
ಮುರುಳ್ಯ,ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪೂರ್ವಾಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾವ್ಯದರ್ಶಿ ಪ್ರದೀಪ್ ಕಲ್ಲರಮೂಲೆ, ಪ್ರಮುಖ ರಾದ ಹರ್ಷಿತ್ ಪೆರುವಾಜೆ, ಮನುದೇವ್ ಪರಮಲೆ, ದುರ್ಗೇಶ್ ಪಾರೆಪ್ಪಡಿ, ಬಿಜೆಪಿ ಪ್ರಮುಖರು, ಮತ್ತಿತರರು ಉಪಸ್ಥಿತರಿದ್ದರು. ಕಡಬ ಉಪ ತಹಸೀಲ್ದಾರ್ ಕೆ.ಟಿ. ಮನೋಹರ್ ಅವರು ಮನವಿ ಸ್ವೀಕರಿಸಿದರು. ಬಳಿಕ ಕಡಬ ಠಾಣೆಗೆ ತೆರಳಿದ ನಿಯೋಗವು ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ಕಡಬ ಎಸ್‌ಐ ಅಭಿನಂದನ್ ಎಂ.ಎಸ್. ಮನವಿ ಸ್ವೀಕರಿಸಿದರು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…