ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ಕುತ್ತಾರಿನಲ್ಲಿರುವ ಕೊರಗಜ್ಜನ ಸನ್ನಿಧಿಗೆ ಭೇಟಿ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಡಿಬಾಸ್ ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿದ್ದು ವಿಶೇಷವಾಗಿತ್ತು. ಡಿಬಾಸ್ ಜೊತೆ ನಟ ಚಿಕ್ಕಣ್ಣ, ಯಶಸ್ ಸೂರ್ಯ್ ಇದ್ದರು.

ಇನ್ನು ಇದೇ ವೇಳೆ ಮಾತನಾಡಿದ ಡಿಬಾಸ್, ಮೊದಲ ಬಾರಿಗೆ ಕೊರಗಜ್ಜನ ಸನ್ನಿಧಿಗೆ ಬಂದಿದ್ದೇನೆ. ಮಂಗಳೂರಿಗೆ ಸುಮಾರು ಸಲ ಬಂದರೂ ಸಹ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಸಧ್ಯ ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದೆ ಅಂತ ದೇಗುಲ ಭೇಟಿಯ ಕಾರಣ ತಿಳಿಸಿದರು.





