ಜನ ಮನದ ನಾಡಿ ಮಿಡಿತ

Advertisement

ಉದ್ಯಮಿ ದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟರ ಧರ್ಮ ಕಾರ್ಯಗಳಿಗೆ ದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಸಾರ್ವಜನಿಕ ಸನ್ಮಾನ…

ಕುಂಬಳೆ: ಅಂಗಡಿಮೊಗರು ಸಮೀಪದ ಇತಿಹಾಸ ಪ್ರಸಿದ್ಧ ದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಶಿವರಾತ್ರಿ ಮಹೋತ್ಸವದ ಸಂದರ್ಭ ಕೊಡುಗೈ ದಾನಿ,ಉದ್ಯಮಿ ,ಸಮಾಜ ಸೇವಕ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರನ್ನು ಕ್ಷೇತ್ರ ಸಮಿತಿ ಜತೆಗೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಸನ್ಮಾನಿಸಿ ಅಭಿನಂದಿಸಿತು.

          ಕ್ಷೇತ್ರ ಆಡಳಿತ ಮೊಕ್ತೇಸರ ನ್ಯಾಯವಾದಿ ಬಿ.ಸುಬ್ಬಯ್ಯ ರೈ ಅವರ ಆಧ್ಯಕ್ಷತೆಯಲ್ಲಿ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಪುತ್ತಿಗೆ ಗ್ರಾಮ ಪಂಚಾಯತಿಯ ಹಲವಾರು ಸಂಘ ಸಂಸ್ಥೆಯ ಪರವಾಗಿ ಪ್ರಮುಖರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಧರ್ಮಕಾರ್ಯಗಳಿಗೆ  ಹಲವೆಡೆ ಸಿಕ್ಕಿದ ಸಂತೋಷದ ಜತೆಗೆ ಇವುಗಳನ್ನು ಗುರುತಿಸುವ ಜನರಿದ್ದಾರೆ ಎನ್ನವುದರಿಂದ ತಾನು ತೃಪ್ತ ಎಂದರು. 

ಶಿಕ್ಷಕ ರಾಜರಾಮ ರಾವ್ ಧಾರ್ಮಿಕ ಭಾಷಣಗೈದರು. ದೇಲಂಪಾಡಿ ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಿರಿಧರ ಶೆಟ್ಟಿ ಮಂಗಳೂರು,ಪುತ್ತಿಗೆ ಗ್ರಾ. ಪಂ.ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ, ಮಲಬಾರ್ ದೇವಸ್ವಂ ಬೋರ್ಡು ಸದಸ್ಯ ಎಂ. ಶಂಕರ ರೈ ಮಾಸ್ತರ್, ಅಭಿಮತ ಟಿವಿ ವಾಹಿನಿಯ ಜನರಲ್ ಮೆನೆಜರ್ ದಾಮೋದರ ಶೆಟ್ಟಿ ಪಟ್ಲ,ಪುತ್ತಿಗೆ ಗ್ರಾ.ಪಂ.ಸದಸ್ಯೆ ಪ್ರೇಮಾ ಎಸ್.ರೈ ಕೊರತ್ತಿಪಾರೆ ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರ ರಸ್ತೆಯನ್ನು ಮರು ಡಾಮರೀಕರಣಗೊಳಿಸಿ ಅಭಿವೃದ್ಧಿಪಡಿಸಲು ಶ್ರಮಿಸಿದ ಪುತ್ತಿಗೆ ಗ್ರಾ. ಪಂ.ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ,ಸದಸ್ಯೆ ಪ್ರೇಮ ಎನ್ ರೈ ಅವರನ್ನು ಕ್ಷೇತ್ರಾಡಳಿತದ ಪರವಾಗಿ ಸನ್ಮಾನಿಸಲಾಯಿತು.  ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಡಿ.ದಾಮೋದರನ್ ಸ್ವಾಗತಿಸಿ ಕಾರ್ಯದರ್ಶಿ ಕೇಶವ ಡಿ ವಂದಿಸಿದರು.ಡಿ.ರಾಜೇಂದ್ರ ರೈ ನಿರೂಪಿಸಿದರು. ಬಳಿಕ ನವಚೇತನ ಯೂತ್ ಕ್ಲಬ್ ಬಾಡೂರು ಇವರಿಂದ “ಕಾಸ್ ದ ಕಸರತ್ತ್” ತುಳು ನಾಟಕ ಪ್ರದರ್ಶನಗೊಂಡಿತು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!