ಹೊಸದಿಲ್ಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಹಣೆಯ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಟ್ವೀಟರ್ (ಎಕ್ಸ್‌ನಲ್ಲಿ) ಪೋಸ್ಟ್ ಮಾಡಿದೆ.

ಆಸ್ಪತ್ರೆಯ ಹಾಸಿಗೆಯ ಮೇಲೆ ಮಮತಾ ಬ್ಯಾನರ್ಜಿ ಅವರು ಗಾಯಗೊಂಡು ಮಲಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷರಿಗೆ ದೊಡ್ಡ ಪ್ರಮಾಣದ ಗಾಯವಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಎಂದು ಟ್ವೀಟ್‌ನಲ್ಲಿ ಪಕ್ಷವು ತಿಳಿಸಿದೆ. ಮಮತಾ ಬ್ಯಾನರ್ಜಿ ಅವರ ಹಣೆಯ ಮಧ್ಯದಲ್ಲಿ ಆಳವಾದ ಗಾಯವಾಗಿ ಮುಖದ ಮೇಲೆ ರಕ್ತ ಸುರಿಯುತ್ತಿದೆ. ಹೇಗೆ ಈ ಅಪಘಾತವಾಯಿತು, ಕಾರಣವೇನು? ಎಂಬ ಮಾಹಿತಿಯನ್ನು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪಕ್ಷವು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.



