ಉಡುಪಿ: ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಯಂತ್ರಗಳ ಕೊರತೆಯಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ.

ಡಯಾಲಿಸಿಸ್ ಚಿಕಿತ್ಸೆ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ, ಸರಿಯಾದ ನಿರ್ವಹಣೆ ಇಲ್ಲದೆ ಯಂತ್ರಗಳು ದುರಸ್ತಿಗೊಂಡಿದ್ದು, ರೋಗಿಗಳು ಖಾಸಗಿ ಆಸ್ಪತ್ರೆಗಳ ಕಡೆಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.ಕಳೆದ ವರ್ಷ ಜನವರಿಯಿಂದ ಸೆಪ್ಟೆಂಬರ್ ತಿಂಗಳವರೆಗೆ ಜಿಲ್ಲಾಸ್ಪತ್ರೆಯಲ್ಲಿ 11 ಡಯಾಲಿಸಿಸ್ ಯಂತ್ರಗಳ ಮೂಲಕ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಯಂತ್ರಗಳ ದುರಸ್ತಿ ಹಾಗೂ ಟೆಂಡರ್ ವಹಿಸಿಕೊಂಡ ಕಂಪೆನಿಯವರು ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಕೇವಲ 4 ಯಂತ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರಸ್ತುತ 9 ಯಂತ್ರಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ವರ್ಷದ ಜನವರಿಯಲ್ಲಿ 45 ಮಂದಿ ರೋಗಿಗಳು 307 ಬಾರಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಯಾಲಿಸಿಸ್ ಯಂತ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.



