ಜನ ಮನದ ನಾಡಿ ಮಿಡಿತ

Advertisement

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.24ರಂದು ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆಮೈದಾನದ ಸಭಾಂಗಣದಲ್ಲಿ ರವಿವಾರ ನಡೆಯಿತು.


ನಯನಾಡು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್‌ನ ಮಾಲಕ ಟಿ.ಹರೀಂದ್ರ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದುಂದು ವೆಚ್ಚದ ವಿವಾಹಗಳ ಬದಲಾಗಿ ಸಾಮೂಹಿಕ ವಿವಾಹ ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು.

ಮೂರ್ಜೆ ನಾರಾಯಣ ಗುರು ವಸತಿ ಶಾಲೆ ಪ್ರಾಂಶುಪಾಲ ಸಂತೋಷ್ ಸನಿಲ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ಭಾರತೀಯ ವಿವಾಹ ಪದ್ಧತಿ ಕುಟುಂಬ ಜೀವನದ ಭದ್ರ ಬುನಾದಿಯಾಗಿದೆ. ಇದು ಕುಟುಂಬದ ಹಾಗೂ ಸಮಾಜದ ನೆಮ್ಮದಿಯ ಸುವ್ಯವಸ್ಥೆಯಾಗಿದೆ ಎಂದರು.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಬಡ, ಹಿಂದುಳಿದ ವರ್ಗದ ಜನತೆ ಅದ್ಧೂರಿಯ ವಿವಾಹ ನಡೆಸಲು ಅಸಾಧ್ಯವಾದ ಕಾರಣ ಸಾಮೂಹಿಕ ವಿವಾಹದ ಮೂಲಕ ವಿಜೃಂಭಣೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಉದ್ಯಮಿ ನಾಗೇಶ್ ಪ್ರಭು ಮೂರ್ಜೆ ಅವರು ಮಂಗಳ ವಸ್ತ್ರ ವಿತರಿಸಿದರು. ಬಡಗಕಜೆಕಾರು ಪ್ರಾ.ಕೃ.ಸಹಕಾರಿ ಸಂಘದ ಉಪಾಧ್ಯಕ್ಷ ರೋಹಿನಾಥ ಕಂರ್ಬಡ್ಕ, ಬಿ.ಸಿ.ರೋಡ್ ನ್ಯಾಯವಾದಿ ಚಿದಾನಂದ ಕಡೇಶ್ವಾಲ್ಯ, ಮಡಂತ್ಯಾರು ಗ್ರಾ.ಪಂ.ಅಧ್ಯಕ್ಷೆ ರೂಪಾ ನವೀನ್, ಮಡಂತ್ಯಾರು ಜೇಸೀ ಅಧ್ಯಕ್ಷ ವಿಕೇಶ್ ಮಾನ್ಯ, ಶ್ರೀ ರಾಮಾಂಜನೇಯ ಭಜನ ಮಂದಿರದ ಅಧ್ಯಕ್ಷ ಶ್ರೀನಿವಾಸ ಅತ್ತಾಜೆ, ಗ್ರಾ.ಪಂ. ಸದಸ್ಯ ಕಾಂತಪ್ಪ ಕರ್ಕೇರ,ಉದ್ಯಮಿ ಗಣೇಶ ಮೂಲ್ಯ ಅನಿಲಡೆ, ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕುರ್ಡುಮೆ, ಪಿಲಾತಬೆಟ್ಟು ಗ್ರಾ.ಪಂ.ಸದಸ್ಯ ಲಕ್ಷ್ಮೀ ನಾರಾಯಣ ಹೆಗ್ಡೆ, ಪಿಲಾತಬೆಟ್ಟು ಪ್ರಾ.ಕೃ.ಸ.ಸಂಘದ ನಿರ್ದೇಶಕಿ ಸರೋಜಾ ಶೆಟ್ಟಿ, ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಂಚಾಲಕ ರಾಜೇಶ್ ಬಂಗೇರ ಪುಳಿಮಜಲು,ಕಾರ್ಯದರ್ಶಿ ಜಯರಾಜ ಅತ್ತಾಜೆ, ಮಾಜಿ ಅಧ್ಯಕ್ಷರಾದ ಮಾಧವ ಬಂಗೇರ, ರತ್ನಾಕರ ಪಿ.ಎಂ.,ಹರೀಶ್ಚಂದ್ರ ಶೆಟ್ಟಿಗಾರ್‌ಮತ್ತಿತರರು ಉಪಸ್ಥಿತರಿದ್ದರು.
ಶಂಕರ ಶೆಟ್ಟಿ ಬೆದ್ರಮಾರ್ ಮತ್ತು ಗಿರೀಶ್ ಸಾಲ್ಯಾನ್ ಹೆಗ್ಡೆಬೆಟ್ಟುಗುತ್ತು ಅವರು ಗುರಿಕಾರರಾಗಿ ಭಾಗವಹಿಸಿ ನಿಶ್ಚಯ ತಾಂಬೂಲ ನೆರವೇರಿಸಿದರು. ಗುರಿಕಾರರು ತುಳುನಾಡಿನ ಸಂಪ್ರದಾಯ ಪ್ರಕಾರ ವೀಳ್ಯೆದೆಲೆ , ಅಡಿಕೆ, ಮಲ್ಲಿಗೆ ಹೂವು ಇರಿಸಿದ ಹರಿವಾಣವನ್ನು ಪರಸ್ಪರ ಬದಲಾಯಿಸಿಕೊಂಡರು. ೬ ಜೋಡಿ ವಧು, ವರರಿಗೆ ಮಂಗಳ ವಸ್ತ್ರ ವಿತರಿಸಲಾಯಿತು. ವಧು-ವರರ ಕುಟುಂಬಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರ

ಕ್ಯಾಪ್ಷನ್: ಸಾಮೂಹಿಕ ವಿವಾಹದ ಪ್ರಯುಕ್ತ ನಡೆದ ಸಾಮೂಹಿಕ ನಿಶ್ಚಿತಾರ್ಥದಲ್ಲಿ ಮಂಗಳ ವಸ್ತ್ರ ವಿತರಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!