ದಕ್ಷಿಣ ಕನ್ನಡ : ಸಮಾಜಸೇವಕಿ, ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ). 7ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ‘ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ’ ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಯಾಗಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗ ಮಂದಿರದಲ್ಲಿ ಮಾರ್ಚ್ 24 , 2024 ರಂದು ನಡೆಯಲಿದೆ ಎಂದು ಸಂಸ್ಥೆಯ ರಾಜ್ಯಾಧ್ಯಕ್ಷರಾದ ಲಕ್ಷಿತಾ ಗಂಗಾವತಿ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಡಾ.ಮಾಲತಿ ಶೆಟ್ಟಿ ಮಾಣೂರುರವರು 18 ವರುಷದಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ ಹಾಗೂ ಕಳೆದ 11 ವರುಷದಿಂದ ಸಾಹಿತ್ಯ ಪರ ಪತ್ರಿಕೆಯನ್ನು ನಡೆಸುತ್ತಿದ್ದಾರೆ. 9 ಕೃತಿಗಳನ್ನು ಸಾಹಿತ್ಯಲೋಕಕ್ಕೆ ನೀಡಿದ್ದಾರೆ. ಇತರ ಹಿರಿಯ ಕಿರಿಯ ಸಾಹಿತಿಗಳ 38 ಕೃತಿಗಳನ್ನು ಅಮೃತ ಪ್ರಕಾಶ ಪತ್ರಿಕೆ ಸರಿಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿ ಪತಿ ಸತ್ಯ ಪ್ರಕಾಶ ಶೆಟ್ಟಿ ಜೊತೆ ವಾಸವಾಗಿದ್ದಾರೆ. ಹಲವಾರು ರಾಜ್ಯ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ಪ್ರಸ್ತುತ ಪತ್ರಿಕೆ ಜೊತೆಗೆ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲೆಯ ಮಾಧ್ಯಮ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ..
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…