ಸರಕಾರಿ ಬಸ್ ಮತ್ತು ಕಾರಿನ ನಡುವೆ ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಬಾಂಬಿಲ ಎಂಬಲ್ಲಿ ಸಂಭವಿಸಿದೆ.
ಕಾರು ಚಾಲಕ, ಕಾವಳಪಡೂರು ಗ್ರಾಮದ ಮಧ್ವಪಲ್ಕೆ ನಿವಾಸಿ ಸಿರಿಲ್ ಡಿಸೋಜ ಅವರು ಗಾಯಾಳುವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ ಬಸ್, ವಗ್ಗ ಕಡೆಗೆ ಸಾಗುತ್ತಿದ್ದ ಕಾರ್‌ಗೆ ಬಾಂಬಿಲ ಸೇತುವೆ ಬಳಿಯ ತಿರುವಿನಲ್ಲಿ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಯಲ್ಲಿ ಕಾರಿನ ಮುಂಭಾಗ ಬಸ್‌ನ ಅಡಿಯಲ್ಲಿ ಸಿಲುಕಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ.
ಬಳಿಕ ಬಸ್ ಅನ್ನು ಹಿಂತೆಗೆದು ಕಾರು ಚಾಲಕನನ್ನು ಹೊರ ತೆಗೆಯಲಾಗಿತ್ತು. ಸ್ಥಳೀಯರು ಖಾಸಗಿ ಆಂಬುಲೆನ್ಸ್ ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಿರಿಲ್ ಅವರ ಕಾಲು ಮುರಿತಗೊಂಡಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂದರ್ಭದಲ್ಲಿ ಬಸ್ ಚಾಲಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು .ಬಂಟ್ವಾಳ ಟ್ರಾಫಿಕ್ ಎಸ್ ಐ.ಸುತೇಶ್ , ಬಂಟ್ವಾಳ ಗ್ರಾಮಾಂತರ ಎಸ್‌ಐ ಹರೀಶ್ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಈ ಸ್ಥಳದಲ್ಲಿ ಪದೇಪದೇ ಅಪಘಾತಗಳಾಗುತ್ತಿದ್ದು, ಹೆದ್ದಾರಿ ಅಭಿವೃದ್ಧಿ ಸಮಯದಲ್ಲಿ ಅವೈಜ್ಞಾನಿಕ ತಿರುವು ನೀಡಿರುವುದು ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ರಸ್ತೆ ಸುರಕ್ಷತೆ ಬಗ್ಗೆ ಕ್ರಮ ಕೈಗೊಳ್ಳಲು ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡುವುದಾಗಿ ಟ್ರಾಫಿಕ್ ಎಸ್‌ಐ ಸುತೇಶ್ ಅವರು ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…