ಸುರತ್ಕಲ್; ಶಿಬರೂರು ದೈವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರಸಾದ ರೂಪವಾಗಿ 10 ಲಕ್ಷ ಬಂದಿರುವುದು ನಮಗೆ ಸಂತಸ ತಂದಿದೆ.
ಮಂಜುನಾಥ ಸ್ವಾಮಿ, ಸ್ವಾಮಿ, ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವದಅನುಗ್ರಹದಿಂದ ಉತ್ಸವ ಸಾಂಗವಾಗಿ ನೆರವೇರುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಿಬರೂರೂರು ಬ್ರಹ್ಮಶ್ರೀ ವೇದವ್ಯಾ ಸ ತಂತ್ರಿ ಹೇಳಿದರು ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡಮಾಡಿದ 10 ಲಕ್ಷ ರೂಪಾಯಿ ಚೆಕ್ ಸ್ವೀಕರಿಸಿ ಮಾತನಾಡಿದರು.
ಮಾಜಿ ಸಚಿವ ಅಭಯಚಂದ್ರಜೈನ್ ಮಾತನಾಡಿ ಧರ್ಮಸ್ಥಳ ಕ್ಷೇತ್ರದಿಂದ 10 ಲಕ್ಷ ಬಂದ ನಂತರ ಶಿಬರೂರು ಕ್ಷೇತ್ರಕ್ಕೆ ಬರುವ ಎಲ್ಲ ಅನುದಾನಗಳು ಕೂಡಿ ಬರುತ್ತದೆ, ಕ್ಷೇತ್ರಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಅನುದಾನ, ಉದ್ಯಮಿಗಳ ಸಹಕಾರ ಬರಲಿ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭ ಶಿಬರೂರುಗುತ್ತು ಪ್ರಶಾಂತ್ ಶೆಟ್ಟಿ ,ಸುಧಾಕರ ಶೇಣವ ದೇಂದೊಟ್ಟುಗುತ್ತು, ಜೀತೇಂದ್ರ ಶೆಟ್ಟಿ ಕೊರ್ಯಾರುಗುತ್ತು, ಶಿವಾನಂದ ಶೆಟ್ಟಿ ಪಡುಮನೆ, ಜಗದೀಶ್ ಶೆಟ್ಟಿ ಪರ್ಲಬೈಲು ಗುತ್ತು, ಸುಧಾಕರ ಶೆಟ್ಟಿ ಬಾಂಗಾವು, ಸೂರಿಂಜೆ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಭುವನಾಭಿರಾಮ ಉಡುಪ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಬಜಪೆ ತಾಲೂಕು ಯೋಜನಾಧಿಕಾರಿ ಕರುಣಾಕರ ಆಚಾರ್ಯ, ಮೇಲ್ವಿಚಾರಕ ಅರಣಾ ಸಾಲಿಯಾನ್, ಅಧ್ಯಕ್ಷ ರವೀಂದ್ರ ಭಟ್ ಕಾರ್ಯದರ್ಶಿಗಳಾದ ಆಶಾ ಶೆಟ್ಟಿ ಶಿಬರೂರು, ಸುಜಾತಾ ಶೆಟ್ಟಿ ಕೊರ್ಯಾರು, ರೋಹಿತಾಶ್ವ ಆಚಾರ್ಯ,
ಸುಮನ್ ಶೆಟ್ಟಿ, ವಿನೀತ್ ಶೆಟ್ಟಿ, ಗೀತಾ ಮಡಿವಾಳ, ಸುರೇಶ್ ಕೈಯೂರು, ದಿನೇಶ್ ಕುಲಾಲ್, ನಿತ್ಯನ್ ಶೆಟ್ಟಿ ಶಿಬರೂರು ಗುತ್ತು, ಪ್ರಭಾಕರ ಶೆಟ್ಟಿ ಪೊಸಕಟ್ಟ ಮತ್ತಿತರರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…