ಅಪಾರ್ಟ್‌ಮೆಂಟ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕುಂದಾಪುರ ಮುಖ್ಯರಸ್ತೆಯ ಹಳೆ ಗೀತಾಂಜಲಿ ಟಾಕೀಸ್ ಬಳಿ ನಡೆದಿದೆ.
ಮೃತರನ್ನು ಅಪಾರ್ಟ್‌ಮೆಂಟ್ ಕಟ್ಟಡದ ನಿವಾಸಿ ಲಕ್ಷ್ಮಿ ಪ್ರತಾಪ್ ನಾಯಕ್ ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಲಕ್ಷ್ಮಿ ಟೆರೇಸ್‌ಗೆ ಹೋಗಿ ಒಣಗಲು ಇಟ್ಟಿದ್ದ ತೆಂಗಿನಕಾಯಿಯನ್ನು ತರಲು ಹೋಗಿದ್ದರು. ದುರದೃಷ್ಟವಶಾತ್, ಅವರು ಆಕಸ್ಮಿಕವಾಗಿ ಟೆರೇಸ್‌ನಲ್ಲಿ ಅಳವಡಿಸಲಾದ ಫೈಬರ್ ಶೀಟ್‌ಗೆ ಕಾಲಿಟ್ಟಿದ್ದಾರೆ. ಅದು ಜಾರಿ ಕೆಳಗೆ ಬಿದ್ದ ಪರಿಣಾಮ ತಲೆ ಮತ್ತು ಕೈಗಳಿಗೆ ತೀವ್ರ ಗಾಯಗಳಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಾಹಿತಿ ಪಡೆದ ಕುಂದಾಪುರ ಪೊಲೀಸ್ ಠಾಣೆಯ ಸಿಬ್ಬಂದಿ, ಲಿಫ್ಟ್ ಪ್ರದೇಶದಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯಲು ಪರದಾಡಿದರು. ಮೃತದೇಹವನ್ನು ಮೇಲಕ್ಕೆ ತರಲು ಅವರು ಲಿಫ್ಟ್ ಸುತ್ತಲೂ ಜೋಡಿಸಲಾದ ಕಬ್ಬಿಣದ ರಾಡ್ಗಳನ್ನು ಕತ್ತರಿಸಬೇಕಾಯಿತು.
ಈ ಘಟನೆ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತ ಲಕ್ಷ್ಮಿ ನಗರದ ಲೆಕ್ಕ ಪರಿಶೋಧಕ ಪ್ರತಾಪ್ ನಾಯಕ್ ಅವರ ಪತ್ನಿಯಾಗಿದ್ದು, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…