ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ವೆಂಕಟಚಲಪತಿಯವರು ಮಾತನಾಡಿ, ಯುವ ವಿದ್ಯಾರ್ಥಿಗಳಿಗೆ ಮತದಾನ ತಮ್ಮಜೀವನದಲ್ಲಿ ಎಷ್ಟು ಮುಖ್ಯ ಹಾಗೂ ಅದು ನಮ್ಮ ಹಕ್ಕು ಎಂದು ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಎಪ್ರಿಲ್ 26 ರಂದು ಮತಗಟ್ಟೆ ತೆರಳಿ ತಮ್ಮ ಜವಾಬ್ದಾರಿಯಂತೆ ಮತ ಚಲಾಯಿಸಿ ಎಂದರು.
ಮೂಡುಬಿದಿರೆ TLMT ಶ್ರೀಮತಿ ರಂಜಿತಾ ಶೆಟ್ಟಿ ಇವರು ಮತದಾನದ ಮಹತ್ವ, ರಾಷ್ಟ್ರದ ಭವಿಷ್ಯ ನಿರ್ಧರಿಸುವಲ್ಲಿ ಯುವ ಮತದಾರರ ಪಾತ್ರ ಮತ್ತು ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ನಿರ್ಧಾರದ ಬಲದ ಬಗೆಗೆ ಉಪಯುಕ್ತ ಮಾಹಿತಿ ನೀಡಿದರು. ಮುಲ್ಕಿ ಹೋಬಳಿ TLMT ಶ್ರೀಮತಿ ಚಿತ್ರಾಶ್ರೀ ಕೆ.ಎಸ್ ಇವರು ಮತದಾರರಿಗೆ ಚುನಾವಣಾ ಆಯೋಗ ಬಳಕೆಗೆ ತಂದಿರುವ ಉಪಯುಕ್ತ Appಗಳು ಹಾಗೂ ಕ್ಷೇತ್ರದ ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರ ಪಾತ್ರದ ಬಗೆಗೆ ಸಕಾಲಿಕ ಮಾಹಿತಿ ಒದಗಿಸಿದರು.ಬಳಿಕ ಮತದಾನ ಮಹತ್ವ ತಿಳಿಸಲು ಪ್ರತಿಜ್ಞಾ ವಿಧಿಯನ್ನುಸ್ವೀಕರಿಸಲಾಯಿತು. ಹಾಗೂ ಮತದಾನಕ್ಕೆ ಜಾಗೃತಿ ಗೀತೆಯನ್ನು ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಪದವಿ ಕಾಲೇಜು ಪ್ರಾಂಶುಪಾಲರಾದ ಹರೀಶ್(ಪ್ರಭಾರ), ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಮೇಶ್‌ಭಟ್ ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ಉಪನ್ಯಾಸಕರಾದ ಪೂರ್ಣಿಮಾ ಅವರು ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾರಾದ ಪ್ರವೀಣ್ ಸ್ವಾಗತಿಸಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…