ಜನ ಮನದ ನಾಡಿ ಮಿಡಿತ

Advertisement

ವಡಭಾಂಡೇಶ್ವರ ಬಲರಾಮ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ


ಉಡುಪಿ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರಾಮ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿತು.

ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರಗಿತು.


ಬೆಳಿಗ್ಗೆ 6.45ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನೆರವೇರಿಸಲಾಯಿತು. ಬಳಿಕ ನ್ಯಾಸಪೂಜೆ ಪ್ರಸನ್ನಪೂಜೆ ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಿತು.

ಸುಮಾರು 15ಸಾವಿರ ಮಂದಿ ಭಕ್ತರು ಪಾಲ್ಗೊಂಡಿದ್ದು ಅನ್ನಪ್ರಸಾದವನ್ನು ಸ್ವೀಕರಿಸಿದರು. ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್, ಅಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ. ಅಮೀನ್, ಪವಿತ್ರಪಾಣಿ ಶಂಕರನಾರಾಯಣ ಐತಾಳ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಉಪಾಧ್ಯಕ್ಷ ರಮೇಶ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು ಕಾರ್ಯದರ್ಶಿ ಜನಾರ್ದನ್ ಕೊಡವೂರು, ಹಾಗೂ ಅಭಿವೃದ್ಧಿ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಭಕ್ತವೃಂದ, ಗುರಿಕಾರರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!