ದಕ್ಷಿಣ ಕನ್ನಡ : ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ). ೭ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ‘ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ’ ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಯಾಗಿ ಆಯ್ಕೆಯಾಗಿದ್ದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗ ಮಂದಿರದಲ್ಲಿ ಇತ್ತೀಚೆಗೆ ‘ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಿದರು.
ಶಿಕ್ಷಣ ತಜ್ಞ ಡಾ. ಕೆ. ಪಿ. ಪುತ್ತೂರಾಯ, ಸಂಸ್ಥೆಯ ಗೌರವಾಧ್ಯಕ್ಷ ಶ್ರೀ ಕೆಂಚನೂರು ಶಂಕರ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಮಾಲತಿ ಸುಧೀರ್, ಖ್ಯಾತ ನಟಿ ಶ್ರೀಮತಿ ಪದ್ಮಾ ವಸಂತಿ, ಖ್ಯಾತ ಗಾಯಕ ಶಶಿಧರ್ ಕೋಟೆ, ಡಾ. ವಿ ಶ್ರೀನಿವಾಸ ಗುರೂಜಿ, ಡಾ. ಶಿವಕುಮಾರ ಗುರೂಜಿ, ಚಲನ ಚಿತ್ರ ನಟ ಶಿವಕುಮಾರ ಆರಾಧ್ಯ, ಉದ್ಯಮಿ ಶ್ರೀ ಮಹೇಂದ್ರ ಸಿಂಗ್ ಕಾಳಪ್ಪ, ಸಂಸ್ಥೆಯ ರಾಜ್ಯಾಧ್ಯಕ್ಷೆ ಶ್ರೀಮತಿ ಲಕ್ಷಿತಾ ಗಂಗಾವತಿ ಉಪಸ್ಥಿತರಿದ್ದರು.
ಡಾ. ಮಾಲತಿ ಶೆಟ್ಟಿ ಮಾಣೂರುರವರು ೧೮ ವರುಷದಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ ಹಾಗೂ ಕಳೆದ ೧೧ ವರುಷದಿಂದ ಸಾಹಿತ್ಯ ಪರ ಪತ್ರಿಕೆಯನ್ನು ನಡೆಸುತ್ತಿದ್ದಾರೆ. ೯ ಕೃತಿಗಳನ್ನು ಸಾಹಿತ್ಯಲೋಕಕ್ಕೆ ನೀಡಿದ್ದಾರೆ. ಇತರ ಹಿರಿಯ ಕಿರಿಯ ಸಾಹಿತಿಗಳ ೩೮ ಕೃತಿಗಳನ್ನು ಅಮೃತ ಪ್ರಕಾಶ ಪತ್ರಿಕೆ ಸರಿಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿ ಪತಿ ಸತ್ಯ ಪ್ರಕಾಶಶೆಟ್ಟಿ ಜೊತೆ ವಾಸವಾಗಿದ್ದಾರೆ. ಹಲವಾರು ರಾಜ್ಯ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…