ವಿರಾಟ್, ರೋಹಿತ್ ಆಟದಿಂದ ವಿಶ್ರಾಂತಿ ಪಡೆದಿದ್ದರಿಂದ ವೆಸ್ಟ್ ಇಂಡೀಸ್ ವಿರುದ್ಧದ ಟಿ-20ಐ ಸರಣಿಗಾಗಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಸೂರ್ಯ ಯಾದವ್ ಉಪ ನಾಯಕನ ಸ್ಥಾನ ವಹಿಸಿಕೊಳ್ಳಲಿದ್ದಾರೆ.
ಮುಂಬೈ (ಮಹಾರಾಷ್ಟ್ರ): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಮ್ಮ ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಭಾರತದ ಟಿ-20ಐ ತಂಡವನ್ನು ಬುಧವಾರ ಪ್ರಕಟಿಸಿದೆ.
ಪಾಂಡ್ಯಗೆ ನಾಯಕತ್ವ: “ಹಿರಿಯರ ಪುರುಷರ ತಂಡದ ಆಯ್ಕೆ ಸಮಿತಿಯು ಕೆರಿಬಿಯನ್ ದ್ವೀಪಗಳು ಮತ್ತು ಯುಎಸ್‌ಎಯ ಫ್ಲೋರಿಡಾದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಐದು ಪಂದ್ಯಗಳ ಟಿ-20ಐ ಸರಣಿಗೆ ಭಾರತ ತಂಡವನ್ನು ಬುಧವಾರ ಆಯ್ಕೆ ಮಾಡಿದೆ” ಎಂದು ತಂಡವನ್ನು ಪ್ರಕಟಿಸಿದ ಬಿಸಿಸಿಐ ಅಧಿಕೃತ ಹೇಳಿಕೆ ಕೂಡಾ ನೀಡಿದೆ.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಉಪನಾಯಕರಾಗಿ ಸೂರ್ಯಕುಮಾರ್ ಯಾದವ್ ಅವರು ಜವಾಬ್ಧಾರಿ ನಿರ್ವಹಿಸಲಿದ್ದಾರೆ.
ಟಿ-20ಐ ತಂಡದಿಂದ ವಿರಾಟ್ ಕೊಹ್ಲಿ ಕೂಡಾ ಈ ಸರಣಿಗೆ ಗೈರುಹಾಜರಾಗಲಿದ್ದಾರೆ. ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಲೈನ್-ಅಪ್‌ನಲ್ಲಿ 3ನೇ ಸ್ಥಾನಕ್ಕೆ ಬರುವ ಸಾಧ್ಯತೆಯಿದೆ. ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡ ಟೆಸ್ಟ್ ಮತ್ತು ಒಡಿಐ ತಂಡಗಳಲ್ಲಿ ಸ್ಥಾನ ಪಡೆದಿರಲಿಲ್ಲ. ಟಿ-20 ಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಎರಡೂ ತಂಡಗಳು ಟಿ-20ಐ ಸರಣಿಗಾಗಿ ಐದು ಪಂದ್ಯಗಳನ್ನು ಆಡಲಿವೆ. ಅದರಲ್ಲಿ ಮೊದಲನೆಯದು ಆಗಸ್ಟ್ 3 ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿದೆ.
ಎರಡನೇ ಟಿ-20ಐ ಗಯಾನಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಗಸ್ಟ್ 6 ರಂದು ನಡೆಯಲಿದ್ದು, ಮೂರನೇ ಪಂದ್ಯವನ್ನು ಆಗಸ್ಟ್ 8 ರಂದು ಅದೇ ಕ್ರೀಡಾಂಗಣದಲ್ಲಿ ಹಾಗು ಐದನೇ ಟಿ-20ಐ ಪಂದ್ಯ ಫ್ಲೋರಿಡಾದ ಬ್ರೋವರ್ಡ್ ಕೌಂಟಿ ಕ್ರೀಡಾಂಗಣದಲ್ಲಿ ಆಗಸ್ಟ್ 12 ಹಾಗೂ 13 ರಂದು ಜರಗಲಿದೆ.
ಭಾರತದ ಟಿ-20ಐ ತಂಡದಲ್ಲಿರುವ ಆಟಗಾರರು: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ವಿಸಿ), ಸಂಜು ಸ್ಯಾಮ್ಸನ್ (ವಿಕೆ), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ಭಾರತದ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.
ಭಾರತದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…