ಉಡುಪಿ: ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡ ಮಗುವನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ರಕ್ಷಿಸಿರುವ ಘಟನೆ ಸಂಭವಿಸಿದೆ.
ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷ ಪ್ರಾಯದ ಪೂರ್ವಿ ಎಂಬ ಮಗುವಿನೊಂದಿಗೆ ಸಮುದ್ರದಲ್ಲಿ ಸ್ನಾನಕ್ಕಿಳಿದಿದ್ದರು. ಈ ವೇಳೆ ಮಗು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ, ನೀರು ಕುಡಿದು, ಪ್ರಜ್ಞಾಹೀನವಾಗಿತ್ತು.
ಇದನ್ನು ಕಂಡ ಮಲ್ಪೆಬೀಚ್ ಆಟೋರಿಕ್ಷಾ ನಿಲ್ದಾಣದ ಆಟೋ ಚಾಲಕರು ಆ ಮಗುವನ್ನು ತನ್ನ ಆಟೋರಿಕ್ಷಾ ಮೂಲಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಬಳಿ ತಲುಪಿಸಿದರು.
ತಕ್ಷಣ ಕಾರ್ಯ ಪ್ರವೃತ್ತರಾದ ಈಶ್ವರ್ ಮಲ್ಪೆ ಮತ್ತು ತಂಡ ಆ ಮಗುವಿಗೆ ಪ್ರಥಮ ಚಿಕಿತ್ಸೆ ನೀಡಿ, ಆಂಬುಲೆನ್ಸ್ ಮೂಲಕ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿತು. ಸದ್ಯ ಮಗು ಚೇತರಿಸಿಕೊಳ್ಳುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…