ಹಳೆಯಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು.
ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯೆಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು. ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು. ಮಹಿಳಾ ಕೇಂದ್ರೀಯ ಘಟಕದ ಅಧ್ಯೆಕ್ಷೆ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯೆಕ್ಷೆ ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಪಾವಂಜೆ ಮೇಳದಿಂದ ಧರ್ಮಸಿಂಹಾಸನ ಯಕ್ಷಗಾನ ಪ್ರದರ್ಶನಗೊಂಡಿತು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…