ಖ್ಯಾತ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿಯವರ ತಾಯಿ, ದಿವಂಗತ ಪಕೀರ ಶೆಟ್ಟಿ ಅವರ ಧರ್ಮಪತ್ನಿ ಲೀಲಾವತಿ ಶೆಟ್ಟಿಯವರು (90) ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಇವರು ತಮ್ಮ ಮಕ್ಕಳಾದ ಕನ್ಯಾನ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ, ರಘುರಾಮ ಶೆಟ್ಟಿ, ರವೀಂದ್ರ ಶೆಟ್ಟಿ, ವಿಜಯಲಕ್ಷ್ಮಿ ಶೆಟ್ಟಿ, ದಿವಾಕರ ಶೆಟ್ಟಿ, ನಿತ್ಯಾನಂದ ಶೆಟ್ಟಿ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ.

ಇನ್ನು ಲೀಲಾವತಿ ಶೆಟ್ಟಿಯವರ ಅಂತ್ಯಕ್ರಿಯೆ ಸಂಜೆ 3 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.







