ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಸಂಶಯಾಸ್ಪದ ರೀತಿಯಲ್ಲಿ ಮೃತ್ಯು

ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ.


ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ‌ ಮನೆಗೆ ಬಾರದೆ, ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಅವರ ಶವ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ಸುವರ್ಣ ನದಿಯಲ್ಲಿ ಪತ್ತೆಯಾಗಿದೆ. ಫೈಜಲ್‌ ಅವರು ಸುವರ್ಣ ನದಿಯ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದು, ಅವರ ಸಾವಿನಲ್ಲಿ ಸಂಶಯವಿದೆ ಎಂದು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!