ಜನ ಮನದ ನಾಡಿ ಮಿಡಿತ

Advertisement

ಅಡಿಕೆ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಉಡುಪಿ: ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಶಂಕರನಾರಾಯಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ (23), ಭಟ್ಕಳ ಬಿಳಲಖಂಡ ಗ್ರಾಮದ ಮುನಾವರ್(21), ಭಟ್ಕಳ ಉಸ್ಮಾನ್ ನಗರದ ನಿಸಾರ್ ಆಸೀಫ್ ಅನ್ನಾರ್(24) ಎಂದು ಗುರುತಿಸಲಾಗಿದೆ. ಬಂಧಿತರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿ ಎಂಬಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಬಂಧಿತರಿಂದ 11.25 ಕ್ವಿಂಟಾಲ್ ಸಿಪ್ಪೆಅಡಿಕೆ, 40ಕೆ.ಜಿ. ಒಣ ಅಡಿಕೆ, ಮತ್ತು ಕೃತ್ಯಕ್ಕೆ ಬಳಸಿದ್ದ ಪಿಕ್‌ಆಪ್ ವಾಹನ ಹಾಗೂ ಸ್ಕೂಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 4,05,750ರೂ. ಅಂದಾಜಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!